ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರು ಸ್ವಚ್ಛಗೊಳಿಸುವಂತೆ ಮಾಲೀಕರುಗಳಿಗೆ ಸೂಚನೆ
ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಿಂದ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು ಇದು ಡೆಂಗ್ಯು ಪ್ರಕರಣಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ ನಗರದ ಎಲ್ಲಾ ಖಾಲಿ ನಿವೇಶನಗಳ ಮಾಲೀಕರು ತಮ್ಮ ಜವಾಬ್ದಾರಿಯನ್ನು ಅರಿತು ನಿವೇಶನ, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರನ್ನು ಸ್ವಚ್ಛಗೊಳಿಸಲು ಪಾಲಿಕೆ ಆಯುಕ್ತರಾದ ರೇಣುಕಾ ಸೂಚಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಒಂದು ವೇಳೆ ಯಾವುದೇ ಖಾಲಿ ನಿವೇಶನ, ಕಟ್ಟಡ ನಿರ್ಮಾಣದಲ್ಲಿರುವ ನಿವೇಶನಗಳಲ್ಲಿ ನೀರು ನಿಂತು ಸೊಳ್ಳೆ ಲಾರ್ವಾಗಳು ಕಂಡುಬಂದಲ್ಲಿ ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ರ ಸೆಕ್ಷನ್ 328 ಹಾಗೂ 333 ಉಲ್ಲಂಘನೆಗಾಗಿ ದಂಡ ವಿಧಿಸುವುದರೊಂದಿಗೆ ಪಾಲಿಕೆಯಿಂದ ನಿವೇಶನ ಸ್ವಚ್ಛಗೊಳಿಸಲು ಕ್ರಮವಹಿಸಿ ತಗುಲುವ ವೆಚ್ಚವನ್ನು ಅಸ್ತಿ ತೆರಿಗೆಯ ಬಾಕಿರೂಪದಲ್ಲಿ ವಸೂಲು ಮಾಡಲು ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.




