ಬೆಳಗಾವಿ: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಸೇರಿದ ಜಮೀನನ್ನು ಹಲವರು ಅತಿಕ್ರಮಣ ಮಾಡಿದ್ದು ಅದನ್ನು ಸ್ವಾಧೀನ ಪಡಿಸಿಕೊಂಡು ಮತ್ತೆ ದೇವಾಲಯದ ಹೆಸರಿಗೆ ನೋಂದಣಿ ಮಾಡಿಕೊಡುವ ಪ್ರಕ್ರಿಯೆ ಆರಂಭಿಸಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
- ಪೌರ ಕಾರ್ಮಿಕರ ದಿರಿಸಿನಲ್ಲಿ ಡಿ ಕೆ ಶಿವಕುಮಾರ್
- ಹಾಸನದಲ್ಲಿ ಭಗತ್ ಸಿಂಗ್ ಜನ್ಮದಿನದ ಅಂಗವಾಗಿ ‘ನಾನೇಕೆ ನಾಸ್ತಿಕ’ ಸಮಾವೇಶ
- ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 25 ಸೀಟು ಕೂಡ ಬರುವುದಿಲ್ಲ: ಆರ್.ಅಶೋಕ
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಪರವಾಗಿ ಬಿಜೆಪಿಯ ರವಿಕುಮಾರ್ ಅವರ ಪ್ರಶ್ನೆಗೆ ವಿಧಾನ ಪರಿಷತ್ ಕಲಾಪದಲ್ಲಿ ಉತ್ತರಿಸಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 6ರಿಂದ 7 ಸಾವಿರ ಆಸ್ತಿಗಳನ್ನು ನೋಂದಣಿ ಮಾಡಿಕೊಟ್ಟಿದ್ದೇವೆ. ಇದರ ದಾಖಲೆಗಳನ್ನು ಸದನದಲ್ಲೂ ನೀಡಿದ್ದೇವೆ. ಹಲವಾರು ವರ್ಷಗಳಿಂದ ಆಗದೆ ಇದ್ದ ಕೆಲಸ ನಮ್ಮ ಅವಧಿಯಲ್ಲಿ ಆಗಿದೆ ಎಂದರು.
ಹಿಂದೆ ಏನಾಗಿದೆ ಎಂಬುದು ಮುಖ್ಯವಲ್ಲ. ಪ್ರಸ್ತುತ ಈಗ ಏನು ಮಾಡುತ್ತಿದ್ದೇವೆ ಎಂದಷ್ಟೇ ಮುಖ್ಯವಾಗಬೇಕು. ಹಿಂದಿನ ಕಥೆಗಳನ್ನು ಹೇಳುತ್ತಾ ಹೋದರೆ, ಈಗಿರುವ ಜಮೀನನ್ನು ಸಹ ಉಳಿಸಿಕೊಳ್ಳಲು ಆಗುವುದಿಲ್ಲ. ದೇವಸ್ಥಾನದ ಜಮೀನನ್ನು ಉಳಿಸಿಕೊಳ್ಳಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ಇದುವರೆಗೆ 15,145.32 ಕೋಟಿ ರೂ. ರಾಜಸ್ವ ಸಂಗ್ರಹಣೆ ಆಗಿದ್ದು, ಈ ಬಾರಿ ಕಳೆದ ಸಾಲಿಗಿಂತ ಹೆಚ್ಚು ರಾಜಸ್ವ ಸಂಗ್ರಹಣೆಯಾಗಲಿದೆ ಎಂದರು.
ಬಿಜೆಪಿಯ ಶಶಿಲ್ ನಮೋಶಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ಸಾಲಿಗಿಂತ ಶೇ.20 ರಷ್ಟು ಹೆಚ್ಚು ಸಂಗ್ರಹದ ಗುರಿ ಇಟ್ಟುಕೊಳ್ಳಲಾಗಿದೆ. ರಾಜ್ಯದಲ್ಲಿ ಭೌತಿಕ ಖಾತೆ ಬಳಸಿ ನೋಂದಣಿ ಮಾಡುತ್ತಿದ್ದ ಸಂದರ್ಭದಲ್ಲಿ ಸುಳ್ಳು ಗುರುತಿನ ಚೀಟಿ ಸೃಷ್ಟಿಸಿಕೊಂಡು, ಸುಳ್ಳು ಪಿಐಡಿ ಸಂಖ್ಯೆ ಸೃಷ್ಟಿಸಿ ಸರ್ಕಾರಿ ಆಸ್ತಿ, ಅಮಾಯಕರ ಆಸ್ತಿಗಳನ್ನು ಬೇರೊಬ್ಬರ ಹೆಸರಿಗೆ ನೋಂದಣಿಯಾಗುತ್ತಿದ್ದ, ವಂಚನೆ ನೊಂದಣಿಗಳನ್ನು ಪ್ರಕರಣಗಳನ್ನು, ನೋಂದಣಿ ಮತ್ತು ಮುದ್ರಾಂಕ ಶುಲ್ಕ ವಂಚನೆಯನ್ನು ಹಾಗೂ ಕಾನೂನುಬದ್ಧ ಅಲ್ಲದ ನೋಂದಣಿಗಳನ್ನು ತಡೆಗಟ್ಟಲಾಗಿದೆ ಎಂದರು.
ಇ-ಖಾತಾ ಸಂಯೋಜನೆಯ ನಂತರ ಕಾನೂನು ಬಾಹಿರ ಮತ್ತು ಬೊಟ್ಟಿ ದಾಖಲೆಗಳನ್ನು ಸೃಷ್ಟಿಸಿಕೊಂಡು ನೋಂದಣಿ ಮಾಡಿಸಿಕೊಳ್ಳುತ್ತಿದ್ದ ದಸ್ತಾವೇಜುಗಳ ಸಂಖ್ಯೆ ಕಡಿಮೆಯಾಗಿದ್ದು, ಕಾನೂನು ಬದ್ದವಾಗಿ ನೈಜವಾದ ಆಸ್ತಿ ನೋಂದಣಿಯಿಂದ ಸರ್ಕಾರಕ್ಕೆ ಯಾವುದೇ ಆದಾಯ ನಷ್ಟ ಉಂಟಾಗಿರುವುದಿಲ್ಲ ಎಂದರು.




