ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಕರ್ಮಕಾಂಡದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಅಧಿಕಾರಿಗಳಿಗೆ ಸಮನ್ಸ್ ನೀಡಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆ ಕುರಿತಾದ ಕೆಲವು ನಿರ್ದಿಷ್ಟ ದಾಖಲೆಗಳೊಂದಿಗೆ ಬೆಂಗಳೂರಿನಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಬರುವಂತೆ ಈ ಅಧಿಕಾರಿಗಳಿಗೆ ನೀಡಿರುವ ಸಮನ್ಸ್ ನಲ್ಲಿ ತಿಳಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡಿದ್ದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಕಚೇರಿ ಮತ್ತು ಮೈಸೂರು ತಾಲ್ಲೂಕು ಕಚೇರಿಯಲ್ಲಿ ಈಚೆಗೆ ಶೋಧ ಕಾರ್ಯ ನಡೆಸಿದ್ದರು
ಪಾರ್ವತಿ ಅವರ ಸೋದರ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ಕೆಂಗೇರಿ ನಿವಾಸದಲ್ಲೂ ಇ.ಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
ವಿಚಾರಣೆ ಪೂರ್ಣಗೊಳಿಸಿದ್ದ ಇ.ಡಿ ಅಧಿಕಾರಿಗಳು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿತ್ತು. ಇದೀಗ ಅದರ ಆಧಾರದಲ್ಲಿ ಅಧಿಕಾರಿಗಳನ್ನು ವಿಚಾರಣೆಗೆ ಬರುವಂತೆ ಸೂಚಿಸಿರುವುದರೊಂದಿಗೆ ಪ್ರಕರಣ ತೀವ್ರ ಸ್ವರೂಪ ಪಡೆದಂತಾಗಿದೆ.




