ಬೆಂಗಳೂರು: ಪ್ರಸಕ್ತ ಸಾಲಿನ ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕೌನ್ಸೆಲಿಂಗ್ ನಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆದಿರುವ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದು, ಅತಿ ಬೇಡಿಕೆಯುಳ್ಳ ಕೋರ್ಸುಗಳ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧ 10 ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಹಗರಣದ ಕಿಂಗ್ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಪ್ರಕಾಶ್, ಅವಿನಾಶ್ ಸೇರಿ 10 ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಲಾಗಿದೆ. ಕೆಇಎನಲ್ಲಿ ಕೌನ್ಸೆಲಿಂಗ್ ಗೆ ಆಯ್ಕೆಯಾಗಿ ತುಂಬಾ ಬೇಡಿಕೆಯುಳ್ಳ ಕಂಪ್ಯೂಟರ್ ಸೈನ್ ಡೇಟಾ ಸೈನ್ಸ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮಷೀನ್ ಲರ್ನಿಂಗ್ ಮೊದಲಾದ ಕೋರ್ಸ್ ಗಳನ್ನು ಪಡೆದುಕೊಂಡು ನಂತರದಲ್ಲಿ ತಾವು ಆಯ್ಕೆ ಮಾಡಿದ ಕಾಲೇಜಿನಲ್ಲಿ ಪ್ರವೇಶ ಪಡೆಯುತ್ತಿರಲಿಲ್ಲ.
ಕಾಲೇಜು ಆಯ್ಕೆ ಮಾಡಿಕೊಳ್ಳದವರ ಸೀಟ್ ಗಳು ಹಾಗೂ ಸರ್ಕಾರದ ಅಡಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು, ದಾಖಲಾತಿ ಪಡೆಯದ ವಿದ್ಯಾರ್ಥಿಗಳ ಸೀಟ್ ಗಳನ್ನು ಗ್ಯಾಂಗ್ ಬ್ಲಾಕ್ ಮಾಡುತ್ತಿತ್ತು. ಆರೋಪಿಗಳು ಕೆಇಎನ ನೌಕರ ಅವಿನಾಶ್ ಸಹಾಯದಿಂದ ಪಾಸ್ವರ್ಡ್ ಪಡೆದು ಸೀಟ್ ಬ್ಲಾಕಿಂಗ್ ಮಾಡುತ್ತಿದ್ದರು ಎಂಬ ಆರೋಪವಿದೆ.
ನಂತರ ಲಕ್ಷಾಂತರ ರೂ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾಡಲಾಗುತ್ತಿತ್ತು. ಈ ಡೀಲ್ ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆಯಿದೆ. ಈ ಕುರಿತು ಅನೇಕ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್ ಟಾಪ್ ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದ.




