ಬೆಂಗಳೂರು: ಇಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಹಣಕಾಸಿನ ಅಕ್ರಮ ನಡೆದಿದೆ ಎನ್ನುವ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬೆಂಗಳೂರು ಸೇರಿ ರಾಜ್ಯಾದ್ಯಂತ ಕೆಲವು ಕಾಲೇಜುಗಳ ಮೇಲೆ ದಾಳಿ ನಡೆಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಂಗಳೂರು ಸೇರಿದಂತೆ ರಾಜ್ಯದಲ್ಲೆಡೆ 18 ಕಡೆಗಳಲ್ಲಿ ಖಾಸಗಿ ಕಾಲೇಜುಗಳು ಮತ್ತು ಅವುಗಳಿಗೆ ಸಂಬಂಧಿಸಿದ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲಿಸಿದ್ದಾರೆ.
ಬೆಂಗಳೂರು ನಗರದ ಪ್ರತಿಷ್ಠಿತ ಬಿಎಂಎಸ್ ಇಂಜಿನಿಯರಿಂಗ್ ಹಾಗೂ ಆಕಾಶ್ ಇಂಜಿನಿಯರಿಂಗ್ ಕಾಲೇಜ್ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದಾರೆ.
ಇಂಜಿನಿಯರಿಂಗ್ ಸೀಟ್‌ಗಳ ಹಂಚಿಕೆಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದ್ದು, ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಸಿಇಟಿ ಫಲಿತಾಂಶದ ಅನ್ವಯ ವಿದ್ಯಾರ್ಥಿಗಳಿಗೆ ಕಾಲೇಜು ಹಂಚಿಕೆ ಮಾಡಿದಂತೆ ಕೆಲ ಕಾಲೇಜುಗಳ ಇಂಜಿನಿಯರಿಂಗ್ ಸೀಟುಗಳನ್ನು ನೀಡುತ್ತಿಲ್ಲ ಎಂದು ಕೆಇಎ ಅಧಿಕಾರಿಗಳು ಆರೋಪ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕೆಇಎ ಅಧಿಕಾರಿಗಳು ಈ ಹಿಂದೆಯೇ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಸಾಕಷ್ಟು ಕಾಲೇಜುಗಳಿಗೆ ಮಲ್ಲೇಶ್ವರಂ ಪೊಲೀಸರು ನೋಟಿಸ್ ಸಹ ನೀಡಿದ್ದರು. ಕೆಇಎ ಪಟ್ಟಿಯಂತೆ ಕಾಲೇಜುಗಳಲ್ಲಿ ಸೀಟು ಹಂಚಿಕೆ ಆಗುತ್ತಿಲ್ಲ. ಲಕ್ಷ ಲಕ್ಷ ಹಣಕ್ಕೆ ಕಾಲೇಜು ಆಡಳಿತ ಮಂಡಳಿ ಸೀಟುಗಳನ್ನು ಬ್ಲಾಕ್ ಮಾಡಿವೆ ಎನ್ನುವ ಆರೋಪ ಕೂಡ ಕೇಳಿಬಂದಿದೆ.
ಹೀಗಾಗಿ ಅಕ್ರಮ ಹಣ ವರ್ಗಾವಣೆ ಮತ್ತು ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ವಿಚಾರವಾಗಿ ಕೇಳಿ ಬಂದ ಆರೋಪದ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ.




