ಚಿತ್ರದುರ್ಗ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಇಂಗ್ಲೀಷ್ ಭಾಷೆಯ ಫಲಿತಾಂಶ ಉತ್ತಮಗೊಳಿಸುವ ಕ್ರಮಗಳ ಕುರಿತು ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳ ಇಂಗ್ಲೀಷ್ ಶಿಕ್ಷಕರಿಗೆ ಜ.3 ರಂದು, ನಗರದ ತರಾಸು ರಂಗಮಂದಿರದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯ ಸಂಪನ್ಮೂಲ ವ್ಯಕ್ತಿ, ಬೆಳಗಾವಿ ಸರ್ಕಾರಿ ಸದಾರ‍್ಸ್ ಪ್ರೌಢಶಾಲೆಯ ಇಂಗ್ಲೀಷ್ ಶಿಕ್ಷಕ ಅಲ್ತಾಫ್ ಹೆಚ್ ಜಹಾಂಗೀರ್, ಇಂಗ್ಲೀಷ್ ಭಾಷೆಯ ಗದ್ಯ ಹಾಗೂ ಪದ್ಯಗಳ ಮುಖ್ಯ ವಿಷಯಗಳು, ಚಿತ್ರ ವಿವರಣೆ ಬೋಧನೆ ತಂತ್ರಗಳು, ಕಥೆ, ವೈಯಕ್ತಿಕ ವಿವರ ಹಾಗೂ ಪ್ರಬಂಧ ಬರವಣಿಗೆ, ಮಂದಗತಿ ಕಲಿಕೆಯ ವಿದ್ಯಾರ್ಥಿಗಳಿಗೆ ಬೋಧಿಸಲು ಕ್ರಿಯಾಯೋಜನೆ ಹಾಗೂ ಸುಲಲಿತ ಆಂಗ್ಲಭಾಷೆ ಬೋಧನೆಯ ಕುರಿತು ಮಾಹಿತಿ ನೀಡುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲೆಯ ಎಲ್ಲ ಪ್ರೌಢಶಾಲೆಯ ಇಂಗ್ಲೀಷ್ ಶಿಕ್ಷಕರು ತಪ್ಪದೇ ಕಾರ್ಯಗಾರಕ್ಕೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದ್ದಾರೆ.




