ಬೆಂಗಳೂರು: ತಮಿಳುನಾಡಿನ ಕರೂರಿನಲ್ಲಾದ ಕಾಲ್ತುಳಿತದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ವಿಧಾನಸೌಧದ ಮುಂಭಾಗ ಕಾಂಗ್ರೆಸ್ ಸರ್ಕಾರದಿಂದ ನಡೆದಿದ್ದ ಆರ್‌ಸಿಬಿ ಸಂಭ್ರಮಾಚರಣೆಯಲ್ಲಾದ ಕಾಲ್ತುಳಿತ ಘಟನೆಯಿಂದಲೇ ನಾವೆಲ್ಲರೂ ದುಃಖಕ್ಕೊಳಗಾಗಿದ್ದೆವು. ತಮಿಳುನಾಡಿನಲ್ಲಿ ನಡೆದಿರುವ ದುರ್ಘಟನೆ ಇದಕ್ಕಿಂತಲೂ ದೊಡ್ಡದಾಗಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ನಟ ವಿಜಯ್ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ. ಡಿಎಂಕೆ ಸರ್ಕಾರ 10 ಸಾವಿರ ಜನರಿಗೆ ಅನುಮತಿ ನೀಡಿದೆ. ಆದರೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿಲ್ಲ. ಈ ಹಿಂದೆಯೇ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದ್ದರೂ, ಅದನ್ನು ಸರ್ಕಾರ ಧಿಕ್ಕರಿಸಿದೆ. ಈ ಅನಾಹುತಕ್ಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರವೇ ನೇರ ಕಾರಣ ಎಂದರು.
ನಟ ವಿಜಯ್ ಕೂಡಲೇ ಕ್ಷಮಾಪಣೆ ಕೇಳಿ, ಆಸ್ಪತ್ರೆಗೆ ಭೇಟಿ ನೀಡಬೇಕಿತ್ತು. ಅದನ್ನು ವಿಜಯ್ ಮಾಡಿಲ್ಲ. ಈ ಪ್ರಕರಣವನ್ನು ನಿವೃತ್ತ ನ್ಯಾಯಮೂರ್ತಿಯ ಸಮಿತಿಗೆ ತನಿಖೆಗೆ ನೀಡಬೇಕೆಂದು ಕರ್ನಾಟಕದ ಬಿಜೆಪಿ ಘಟಕ ಆಗ್ರಹಿಸುತ್ತಿದೆ ಎಂದರು.
ಬೆಳಗಾವಿ, ರಾಯಚೂರು, ವಿಜಯಪುರ ಮೊದಲಾದ ಭಾಗಗಳಲ್ಲಿ ಪ್ರವಾಸ ಮಾಡಿ ಮಳೆ ಹಾನಿ ಪರಿಶೀಲನೆ ಮಾಡುತ್ತೇನೆ. ಹಿಂದೆ ಬಿಜೆಪಿ ಇದ್ದಾಗ ಜನರಿಗೆ ಉತ್ತಮ ಪರಿಹಾರ ನೀಡಲಾಗಿತ್ತು. ಈಗ ಕಾಂಗ್ರೆಸ್ ಏನೂ ನೀಡುತ್ತಿಲ್ಲ. ರೈತರಿಗೆ ಬೆಳೆ ಪರಿಹಾರ ನೀಡಿಲ್ಲ ಎಂದರು.




