ಬೆಂಗಳೂರು: ರಾಜ್ಯದಿಂದ ಲೋಕಸಭೆಗೆ ಆಯ್ಕೆಯಾಗಿರುವ ನೂತನ ಸಂಸದರು ಜನರ ಧ್ವನಿಯಾಗಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ಮಲತಾಯಿ ಧೋರಣೆ ವಿರುದ್ಧ ದನಿ ಎತ್ತಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ರಾಜ್ಯ ನಾಯಕರೊಂದಿಗೆ ರಾಹುಲ್ ಗಾಂಧಿ ನಡೆಸಿದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಆಯ್ಕೆಯಾದ 9 ಸಂಸದರಿಗೆ ಅಭಿನಂದನೆ ಸಲ್ಲಿಸಿ, ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು ಎಂದರು.
ಮೊದಲ ಬಾರಿಗೆ ಗೆದ್ದವರು ಕ್ಷೇತ್ರದಿಂದ ದೂರ ಉಳಿಯಬಾರದು. ಬೆಂಗಳೂರು ಹಾಗೂ ದೆಹಲಿಗಿಂತ ಹೆಚ್ಚಾಗಿ ಕ್ಷೇತ್ರದ ಜನರ ಸಂಪರ್ಕದಲ್ಲಿ ಇರಬೇಕು. ನಮ್ಮದೇ ಸರ್ಕಾರ ರಾಜ್ಯದಲ್ಲಿದ್ದು, ಅದರ ನೆರವು ಪಡೆದು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು ಎಂದು ತಿಳಿಸಿದರು.
ಈ ಹಿಂದೆ ಇದ್ದ ಸಂಸದರ ಪೈಕಿ ಒಬ್ಬರ ಹೊರತಾಗಿ ಉಳಿದವರು ರಾಜ್ಯದ ಪರವಾಗಿ ಧ್ವನಿ ಎತ್ತಲಿಲ್ಲ. ತೆರಿಗೆ ಅನ್ಯಾಯ, ಕಳಸಾ ಬಂಡೂರಿ, ಮೇಕೆದಾಟು, ಭದ್ರ ಮೇಲ್ದಂಡೆ ಯೋಜನೆ ಅನುದಾನ, ಹಣಕಾಸು ಆಯೋಗದ ಅನುದಾನ, ಫೆರಿಫೆರಲ್ ರಿಂಗ್ ರಸ್ತೆ ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಅನುದಾನ ಹಾಗೂ ಯೋಜನೆಗಳು ಹಾಗೂ ಕೇಂದ್ರದ ಮಲತಾಯಿ ಧೋರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಸೂಚಿಸಿರುವುದಾಗಿ ಮಾಹಿತಿ ನೀಡಿದರು.
ಸಚಿವರ ಕ್ಷೇತ್ರಗಳಲ್ಲೇ ಕಾಂಗ್ರೆಸ್ ಅಭ್ಯರ್ಥಿಗೆ ಮುನ್ನಡೆ ಕೊಡಿಸಲು ಆಗಿಲ್ಲ ಎಂಬ ವಿಚಾರವಾಗಿ ಎಲ್ಲಾ ಸಚಿವರ ಜತೆ ಚರ್ಚೆ ಮಾಡಿದ್ದಾರೆ. ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್ ನಾಯಕರು ವರದಿ ಕೇಳಿದ್ದು, ನಾವು ಎಲ್ಲಾ ನಾಯಕರ ಜತೆ ಚರ್ಚೆ ಮಾಡಿ ವರದಿ ಸಲ್ಲಿಸುತ್ತೇವೆ ಎಂದರು.
ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗುತ್ತಾರಾ ಎಂದು ಕೇಳಿದಾಗ, ಇಡೀ ದೇಶ ರಾಹುಲ್ ಗಾಂಧಿ ಅವರನ್ನು ಕೇವಲ ವಿರೋಧ ಪಕ್ಷದ ನಾಯಕ ಮಾತ್ರವಲ್ಲ ಪ್ರಧಾನಮಂತ್ರಿಯಾಗಿ ನೋಡಲು ಬಯಸುತ್ತಿದೆ. ಸದ್ಯಕ್ಕೆ ಅವರು ವಿರೋಧ ಪಕ್ಷದ ನಾಯಕರಾಗಲಿ ಎಂದು ಬಯಸುತ್ತಿದ್ದೇವೆ ಎಂದರು.




