ಧಾರವಾಡ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಪ್ರಾಯೋಜಿಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಇವರು ಸ್ವಂತ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ನಿರುದ್ಯೋಗ ಯುವಕ, ಯುವತಿಯರಿಗೆ ಹಾಗೂ ಮಹಿಳೆಯರಿಗೆ 1 ದಿನದ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವನ್ನು ಜುಲೈ 28, 2026 ರಂದು ಬೆಳಿಗ್ಗೆ 10 ಗಂಟೆಗೆ ಧಾರವಾಡ ಮಹಿಷಿ ರೋಡಿನಲ್ಲಿರುವ ವಿವೇಕಾ ಗ್ರಾಮೀಣ ಜೀವನಾಧಾರ ಕೇಂದ್ರ ಶಾರದಾ ಚಾರಿಟೇಬಲ್ ಟ್ರಸ್ಟ್ ಬಿಲ್ಡಿಂಗ್‍ದಲ್ಲಿ ಹಮ್ಮಿಕೊಳ್ಳಲಾಗಿದೆ.
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
- ಪೆರಿಯಾರ್ ಹೋರಾಟ ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ
ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಪ್ರೆರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.
ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೊರಲಾಗಿದೆ. ಭಾಗವಹಿಸುವವರು ಕನಿಷ್ಠ 18 ವರ್ಷದವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ: 8792343840 ಸಂಪರ್ಕಿಸಬಹುದು.




