ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರ

2 years ago

ಶಿವಮೊಗ್ಗ: ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್ (ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಅಭ್ಯರ್ಥಿಗಳಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಜುಲೈ ತಿಂಗಳ ಕೊನೆಯ ವಾರದಲ್ಲಿ ನಡೆಸಲು ಉದ್ದೇಶಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಬಯಸುವ ಆಸಕ್ತರಿಗೆ ಪ್ರೇರೇಪಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ದಿ ತರಬೇತಿ ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು.

ಕನಿಷ್ಟ 18 ವರ್ಷ ವಯಸ್ಸಿನವರು ಹಾಗೂ ಓದಲು/ಬರೆಯಲು ಬರುವ ಅಭ್ಯರ್ಥಿಗಳು ಭಾಗವಹಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್ಸ್, ನೆಹರು ರಸ್ತೆ, ಶಿವಮೊಗ್ಗ, ಅವಿನಾಶ್ ಎ, ತರಬೇತುದಾರರು ಮೊ.ಸಂ: 9164811887 ಇವರನ್ನು ಸಂಪರ್ಕಿಸಹುದು.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 2 ಪಾಸ್ಪೋಹರ್ಟ್ ಅಳತೆಯ ಫೋಟೊ ಹಾಗೂ ಆಧಾರ್ ಕಾರ್ಡ್ನು ಪ್ರತಿಯೊಂದಿಗೆ ಸಂಪರ್ಕಿಸಬಹುದು.

Leave a Reply