ಬೆಳಗಾವಿ: ರಾಜ್ಯದ ಎರಡನೇ ರಾಜ್ಯಧಾನಿ ಎಂದು ಬೆಳಗಾವಿ ಜಿಲ್ಲೆ ಗುರುತಿಸಿಕೊಂಡಿದೆ. ಬಹಳ ದೊಡ್ಡದಾಗಿ ಜಿಲ್ಲೆಯ ವಿಸ್ತೀರ್ಣ ಇರುವುದರಿಂದ ಇನ್ನಷ್ಟು ಬಸ್ ಗಳ ಸೌಲಭ್ಯದ ಅವಶ್ಯಕತೆ ಇದೆ. ನೂತನವಾಗಿ ನಿರ್ಮಾಣಗೊಂಡ ಸಾರಿಗೆ ಇಲಾಖೆ ಕಟ್ಟಡ ಸುಮಾರು 10 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಬೆಳಗಾವಿ ವಿಭಾಗ ಜಂಟಿ ಸಾರಿಗೆ ಆಯುಕ್ತರು ಕಚೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರಿಗೆ ಇಲಾಖೆಯ ಬಗ್ಗೆ ಸಾರ್ವಜನಿಕರಿಂದ ಮಧ್ಯವರ್ತಿಗಳ ಹಾವಳಿ ಇದೆ ಎಂದು ಆರೋಪವಿದೆ. ಹಾಗಾಗಿ ಮಧ್ಯವರ್ತಿಗಳ ಪ್ರವೇಶ ನಿರ್ಬಂಧಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತ್ವರಿತಗತಿಯಿಂದ ಇಲಾಖೆಯ ಸಿಬ್ಬಂದಿ ಸೇವೆಗಳನ್ನು ಒದಗಿಸಬೇಕು ಎಂದರು.


















