ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ. ಪರಿಸರವನ್ನು ಪಠ್ಯಕ್ರಮವಾಗಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ಪರಿಸರ ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಂಗಳೂರಿನಲ್ಲಿ ಆಯೋಜಿಸಿದ್ದ “ವಿಶ್ವ ಪರಿಸರ ದಿನಾಚರಣೆ – 2025” ನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಿದ ಅವರು, ಈ ಬಾರಿಯ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ “ಪ್ಲಾಸ್ಟಿಕ್ ಮಾಲಿನ್ಯ ಕೊನೆಗಾಣಿಸಿ” ಎಂದಿದೆ. ಇದು ಕಷ್ಟದ ಕೆಲಸವಾದರೂ ನಾವು ಮಾಡಲೇಬೇಕಾಗುತ್ತದೆ. ಪರಿಸರ ಶುದ್ಧವಾಗಿದ್ದರೆ ಜನ ಆರೋಗ್ಯ, ಪ್ರಕೃತಿಯನ್ನು ಉಳಿಸಿಕೊಳ್ಳಲು ಸಾಧ್ಯ. ಪ್ರಕೃತಿ ಮನುಷ್ಯನ ಆಸೆಗಳನ್ನು ಈಡೇರಿಸುತ್ತದೆ. ಆದರೆ ದುರಾಸೆಗಳನ್ನಲ್ಲ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು ಎಂದರು.
ದುರಾಸೆಯಿಂದ ಪ್ರಕೃತಿಯನ್ನು ನಾಶ ಮಾಡಿದರೆ ನಮ್ಮನ್ನು ನಾವೇ ನಾಶ ಮಾಡಿಕೊಂಡಂತೆ. ಕರ್ನಾಟಕದಲ್ಲಿ ಪಶ್ಚಿಮ ಘಟ್ಟ, ವೈವಿಧ್ಯಮಯ ಕಾಡು, ನದಿಗಳು, ಜೀವ ಸಂಪತ್ತನ್ನು ನಾವು ಕಾಪಾಡಬೇಕು. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇಂದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಬೆಂಗಳೂರು ಒಂದರಲ್ಲೇ ದಿನವೊಂದಕ್ಕೆ 900 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತದೆ. 1.50 ಕೋಟಿ ಜನಸಂಖ್ಯೆಯನ್ನು ಬೆಂಗಳೂರು ಹೊಂದಿದೆ. ಜನಸಂಖ್ಯೆ ಬೆಳೆದಷ್ಟು ಪರಿಸರದ ಮೇಲೆ ಹಾನಿ ಉಂಟಾಗುತ್ತಿದೆ. ದೇಶ ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿದೆ. ಜನಸಂಖ್ಯೆಯ ನಿಯಂತ್ರಣದ ಜೊತೆಗೆ ಪರಿಸರದ ಕುರಿತು ಜ್ಞಾನವನ್ನು ಬೆಳೆಸಿಕೊಳ್ಳಬೇಕಿದೆ ಎಂದರು.
ಭೂಮಿಯಲ್ಲಿ ರಾಸಾಯನಿಕ ಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಕಡಿಮೆಯಾಗಿದೆ. ಇದನ್ನು ಹೀಗೇ ಬಿಟ್ಟರೆ ಕರ್ನಾಟಕ ಮುಂದೆ ಮರುಭೂಮಿಯಾಗಲಿದೆ. ಅದಕ್ಕಾಗಿ ನಾವು ಈಗಲೇ ಎಚ್ಚರಿಕೆ ವಹಿಸಲೇಬೇಕು. ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು. ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಮರುಬಳಕೆ ಘಟಕದಿಂದ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ನಾವಿಂದು ಪ್ಲಾಸ್ಟಿಕ್ ಗೆ ಪರ್ಯಾಯ ವ್ಯವಸ್ಥೆ ಕಂಡುಕೊಳ್ಳಬೇಕು ಎಂದರು.
ಪುನರ್ಬಳಕೆ ಮತ್ತು ಮರುಬಳಕೆ ಪ್ರೋತ್ಸಾಹಿಸಿ, ಏಕ ಬಳಕೆ ಪ್ಲಾಸ್ಟಿಕ್ ನಿಲ್ಲಿಸೋಣ, ಸಾರ್ವಜನಿಕ ಸಾರಿಗೆ ಉಪಯೋಗಿಸೋಣ, ಹತ್ತಿರದ ಸ್ಥಳಗಳಿಗೆ ನಡೆದು ಹೋಗುವ ಅಥವಾ ಸೈಕಲ್ ಬಳಕೆ ಮಾಡೋಣ, ಹನಿ ಹನಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳೋಣ, ನೀರನ್ನು ಪೋಲು ಮಾಡದೇ ಜವಾಬ್ದಾರಿಯುತವಾಗಿ ಬಳಸೋಣ. ಸಾಧ್ಯವಾದ ಮಟ್ಟಿಗೆ ಇದು ಪ್ರತಿಯೊಬ್ಬರ ಕರ್ತವ್ಯ ಎಂದು ಅರಿತು ‘ನನ್ನ ಜೀವ ನನ್ನ ಮರ’ ಎಂದು ಗಿಡ ಮರಗಳನ್ನು ನೆಟ್ಟು ಬೆಳೆಸೋಣ ಎಂದರು.
ಪರಿಸರ ನ್ಯಾಯ, ಸುಸ್ಥಿರ ಬದ್ಧತೆಗೆ ಸಂಪೂರ್ಣ ಒಪ್ಪಿಗೆ ನೀಡಲಾಗುವುದು ಎಂದರು.




