ಬೆಂಗಳೂರು: ತಾನು ಹೇಳಿದ ಸುಳ್ಳನ್ನು ಅಳಿಸಿಹಾಕುವುದೆಂದರೆ ವಾಂತಿ ಮಾಡಿ, ಅದನ್ನು ಮಾಡಿದವರೇ ತಿಂದ ಹಾಗೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
- ಕಲಾಗ್ರಾಮದಲ್ಲಿ ಸ್ಪರ್ಶ ಮಕ್ಕಳ ನಾಟಕೋತ್ಸವ
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
ಹೊಸಕೋಟೆ ಅವಿಮುಕ್ತೇಶ್ವರ ದೇವಸ್ಥಾನಕ್ಕೆ ಸದಸ್ಯರ ನೇಮಕ ವಿಚಾರದಲ್ಲಿ ಕೋಮು ಬಣ್ಣ ಬಳಿಯಲು ಬಿಜೆಪಿ ಯತ್ನಿಸಿತ್ತು. ಆದರೆ ಬಿಜೆಪಿ ಅವಧಿಯಲ್ಲಿ ಕೂಡ ಮುಸ್ಲಿಂ ಸಮುದಾಯದವರನ್ನು ಸಮಿತಿಗೆ ನೇಮಿಸಲಾಗಿತ್ತು. ಇದನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಿದ್ದರಾಮಯ್ಯ ದಾಖಲೆ ಸಮೇತ ಬಹಿರಂಗಪಡಿಸಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪೋಸ್ಟ್ ಅನ್ನು ಡಿಲೀಟ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸುಳ್ಳು ಹೇಳಿ ಸಿಕ್ಕಿಹಾಕಿಕೊಂಡ ರಾಜ್ಯ BJP Karnataka ನಾವು ಸತ್ಯವನ್ನು ಬಿಚ್ಚಿಟ್ಟ ಕೂಡಲೇ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಸುಳ್ಳು ಆರೋಪದ ಹೇಳಿಕೆಯನ್ನು ಅಳಿಸಿಹಾಕಿದೆ ಎಂದು ಹೇಳಿದ್ದಾರೆ.

ಹೊಸಕೋಟೆಯ ಅವಿಮುಕ್ತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಸಮಿತಿಗೆ ಕಾಂಗ್ರೆಸ್ ಸರ್ಕಾರ ಮುಸ್ಲಿಮ್ ಸಮುದಾಯದ ವ್ಯಕ್ತಿಯನ್ನು ಸದಸ್ಯರನ್ನಾಗಿ ಮಾಡಿ ಹಿಂದೂಗಳ ಅಧಿಕಾರವನ್ನು ಕಿತ್ತುಕೊಳ‍್ಳಲು ಹೊರಟಿದೆ ಎಂಬ ಸುಳ್ಳು ಆರೋಪವನ್ನು ರಾಜ್ಯ ಬಿಜೆಪಿ ಮಾಡಿತ್ತು ಎಂದಿದ್ದಾರೆ.

ಈ ಬ್ರಹ್ಮರಥೋತ್ಸವ ಸಮಿತಿಗೆ ಬಿಜೆಪಿ ಸರ್ಕಾರದ ಕಾಲದಲ್ಲಿಯೂ ಮುಸ್ಲಿಮ್ ಸಮುದಾಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ಮಾಡಲಾಗಿತ್ತು ಎಂಬ ಸತ್ಯ ಸಂಗತಿಯನ್ನು ನಾನು ದಾಖಲೆ ಸಮೇತ ಮುಂದಿಟ್ಟದ್ದು ಮಾತ್ರವಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿನ ತನ್ನ ಹೇಳಿಕೆಯನ್ನು ಬಿಜೆಪಿ ಅಳಿಸಿಹಾಕಿ ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದೆ ಎಂದಿದ್ದಾರೆ.

ಬಣ್ಣ ಬಯಲಾದ ಕೂಡಲೇ ಎಚ್ಚೆತ್ತುಗೊಂಡ ಲಜ್ಜೆಗೆಟ್ಟ ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿದ್ದ ತನ್ನ ಹೇಳಿಕೆಯನ್ನು ಅಳಿಸಿಹಾಕಿದೆ. ಈ ಬಗ್ಗೆ ಇನ್ನೂ ರಾಜ್ಯದ ಜನರ ಕ್ಷಮೆ ಕೇಳಿಲ್ಲ ಎಂದು ಹೇಳಿದ್ದಾರೆ.




