ಬೆಂಗಳೂರು: ಬೆಳಗಾವಿ ಜಿಲ್ಲೆ ಭೂತರಾಮನಹಟ್ಟಿಯ ಕಿತ್ತೂರುರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 19 ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಪ್ರಾಥಮಿಕ ವರದಿಗಳ ಪ್ರಕಾರ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ, ಮೃಗಾಲಯದ ಬೇರೆ ಯಾವುದೇ ಪ್ರಾಣಿಗೆ ಸೋಂಕು ತಗುಲದಂತೆ ಎಲ್ಲ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಇತ್ಯಾದಿ ಸಾಕು ಪ್ರಾಣಿಗಳಿಂದ ಈ ಕಾಯಿಲೆ ಹರಡಿದೆಯೇ ಎಂಬ ಬಗ್ಗೆ ಒಂದು ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.
ಮೃಗಾಲಯದಲ್ಲಿರುವ ಪ್ರಾಣಿಗಳು ಈ ರೀತಿ ಸಾವಿಗೀಡಾಗುವುದು ಆತಂಕದ ವಿಚಾರವಾಗಿದ್ದು, ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆಯೂ ಆದೇಶ ನೀಡಿದ್ದಾರೆ.




