ಬೆಂಗಳೂರು ನಗರದ ಬಹುತೇಕ ಸರ್ಕಾರಿ ಆಸ್ಪತ್ರೆಗಳು ಮತ್ತು ಜಯದೇವ ಹಾಗೂ ಕಿದ್ವಾಯಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಅವರ ರೋಗಗಳನ್ನು ನಿರ್ಣಯಿಸುವ ವಿವಿಧ ಪರೀಕ್ಷೆಗಳು ಮಾಡಿಸಿಕೊಳ್ಳಲು ಹೆಚ್ಚಿನ ಒತ್ತಡವಿರುತ್ತದೆ. ಇವುಗಳನ್ನ ಖಾಸಗಿ ಲ್ಯಾಬ್ ಗಳಲ್ಲಿ ಮಾಡಿಸಿಕೊಳ್ಳಬೇಕಾದರೆ ಸಾಕಷ್ಟು ಹಣ ಖರ್ಚಾಗುತ್ತದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಕನಿಷ್ಠ ಮತ್ತು ಪ್ರತಿಯೊಂದು ಜಿಲ್ಲೆಯಲ್ಲಿ ಒಂದೊಂದು ಅತ್ಯಾಧುನಿಕವಾದ ಉಪಕರಣಗಳನ್ನು ಒಳಗೊಂಡಿರುವ ದೊಡ್ಡ ಪ್ರಮಾಣದ ರೋಗ ನಿರ್ಣಾಯಕ ಕೇಂದ್ರ ಅಂದರೆ ಡಯಾಗ್ನೋಸ್ಟಿಕ್ ಸೆಂಟರ್ ಗಳನ್ನ ಸ್ಥಾಪಿಸಬೇಕೆಂದು ಮಾನ್ಯ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಲ್ಲಿ ಕೋರಿಕೊಳ್ಳುತ್ತೇನೆ.
ಇದರಿಂದ ಸರ್ಕಾರಿ ಆಸ್ಪತ್ರೆಗಳ ಮತ್ತು ವಿಶೇಷವಾಗಿ ಬೆಂಗಳೂರಿನ ಜಯದೇವ ಮತ್ತು ಕಿದ್ವಾಯಿ ಆಸ್ಪತ್ರೆಗಳಲ್ಲಿ ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಚ್ಚಿನ ಒತ್ತಡ ತಪ್ಪುತ್ತದೆ.
ರೋಗಿಗಳು ವಿವಿಧ ಪರೀಕ್ಷೆಗಳನ್ನ ಮಾಡಿಸಿಕೊಳ್ಳಲು ಹೆಚ್ಚಿನ ಸಮಯವನ್ನು ಕಾಯಬೇಕಾಗುತ್ತದೆ ಮತ್ತು ಇದಕ್ಕಾಗಿ ಅವರು ಅನಿವಾರ್ಯವಾಗಿ ಖಾಸಗಿ ಲ್ಯಾಬ್ ಗಳನ್ನು ಅವಲಂಬಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂತಹ ರೋಗ ನಿರ್ಣಾಯಕ ಕೇಂದ್ರಗಳು ದೊಡ್ಡ ಪ್ರಮಾಣದಲ್ಲಿ ಸ್ಥಾಪಿಸಿ ಒಂದೇ ಸೂರಿನ ಅಡಿಯಲ್ಲಿ ಎಲ್ಲ ರೀತಿಯ ರೋಗ ನಿರ್ಣಾಯಕ ಪರೀಕ್ಷೆಗಳು ಸಾರ್ವಜನಿಕರಿಗೆ ದೊರೆಯುವಂತಾಗಲಿ.
ಬಿಪಿಎಲ್ ಕಾರ್ಡುದಾರರಿಗೆ ಎಂದಿನಂತೆ ಉಚಿತವಾಗಿ ಮತ್ತು ಬೇರೆ ನಾಗರಿಕರಿಗೆ ಸ್ವಲ್ಪ ರಿಯಾಯಿತಿ ದರದಲ್ಲಿ ಈ ಸೌಲಭ್ಯವನ್ನು ಒದಗಿಸಿ ಕೊಡಬೇಕೆಂದು ಕೋರುತ್ತೇನೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪ್ರತಿದಿನವೂ ಸಾರ್ವಜನಿಕರು ಪಡುತ್ತಿರುವಂತಹ ಹಿಂಸೆಯನ್ನು ಗಮನಿಸಿದಾಗ ಇದರ ಅವಶ್ಯಕತೆ ತುರ್ತಾಗಿ ಇದೆ ಎಂದು ಭಾವಿಸುತ್ತೇನೆ.
– ಕೆ ಎಸ್ ನಾಗರಾಜ್, ಬೆಂಗಳೂರು




