ಬೆಂಗಳೂರು: ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಸರ್ಕಾರ ಡೀಪ್ಫೇಕ್, ಡೀಪ್ಪೋರ್ನ್ ಹಾಗೂ ಆನ್ಲೈನ್ ಮಕ್ಕಳ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳ ತನಿಖೆ ಮತ್ತು ನಿಯಂತ್ರಣಕ್ಕಾಗಿ ಪ್ರತ್ಯೇಕವಾಗಿ ಮಹಿಳಾ ಮತ್ತು ಮಕ್ಕಳ ಸೈಬರ್ ರಕ್ಷಣೆ ದಳ (ಎಂಎಂಸಿಆರ್ಡಿ) ಸ್ಥಾಪಿಸಲು ಉದ್ದೇಶಿಸಿದೆ.
- ಪ್ರತ್ಯೇಕ ಮಹಿಳಾ ಮತ್ತು ಮಕ್ಕಳ ಸೈಬರ್ ರಕ್ಷಣೆ ದಳ ಸ್ಥಾಪನೆ
- ಮನವಿಗೆ ಸ್ಪಂದಿಸದಿದ್ದರೆ ಕಾನೂನು ಹೋರಾಟ: ಡಾ.ಜಿ.ಪರಮೇಶ್ವರ್
- ಜಿಲ್ಲಾ, ತಾಲೂಕು ಪಂಚಾಯಿತಿಗಳಿಗೆ ಜನವರಿಯಲ್ಲಿ ಚುನಾವಣೆ: ಈಶ್ವರ್ ಖಂಡ್ರೆ
- ‘ಸ್ಮೋಕಿಂಗ್ ಫ್ರೀ ಝೋನ್’ ಜಾರಿಗೆ ತರಲು ಪ್ರಸ್ತಾವನೆ ಸಿದ್ಧ
- ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧ: ಡಿ.ಕೆ.ಶಿವಕುಮಾರ್
ಮಹಿಳೆಯರು ಮತ್ತು ಮಕ್ಕಳ ಸೈಬರ್ ಸುರಕ್ಷತೆಯನ್ನು ಪ್ರಮುಖ ಉದ್ದೇಶವಾಗಿಟ್ಟುಕೊಂಡು ಈ ವಿಶೇಷ ಘಟಕವನ್ನು ರಚಿಸಲಾಗುತ್ತಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ಆನ್ಲೈನ್ ಅಪರಾಧಗಳಿಗೆ ಸಂಬಂಧಿಸಿದ ದೂರುಗಳ ಸ್ವೀಕಾರ, ಪ್ರಕರಣಗಳ ತನಿಖೆ ಹಾಗೂ ಅಪರಾಧಿಗಳ ಪತ್ತೆಗೆ ಘಟಕ ಆದ್ಯತೆ ನೀಡಲಿದೆ.
ಹೊಸ ಘಟಕ ಡಾರ್ಕ್ವೆಬ್ ಸೇರಿದಂತೆ ವಿವಿಧ ಆನ್ಲೈನ್ ವೇದಿಕೆಗಳ ಮೇಲೆ ನಿಗಾ ಇರಿಸಲಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧಿಸಿದ ಆಕ್ಷೇಪಾರ್ಹ ಡಿಜಿಟಲ್ ವಿಷಯಗಳನ್ನು ಪತ್ತೆಹಚ್ಚಲು ಹಾಗೂ ಸಂತ್ರಸ್ತರನ್ನು ಗುರುತಿಸಲು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲಿದೆ. ಸಂತ್ರಸ್ತರು ಯಾವುದೇ ಭಯವಿಲ್ಲದೆ ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳಲು ಅನುಕೂಲವಾಗುವಂತೆ ಘಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸಿಬ್ಬಂದಿ ನಿಯೋಜಿಸುವ ಉದ್ದೇಶವಿದೆ.
ಕೇವಲ ಅಪರಾಧಿಗಳನ್ನು ಪತ್ತೆಹಚ್ಚುವುದಷ್ಟೇ ಅಲ್ಲದೆ, ಸಂತ್ರಸ್ತರಿಗೆ ಮಾನಸಿಕ ಸಮಾಲೋಚನೆ ಮತ್ತು ಅಗತ್ಯ ನೆರವು ಒದಗಿಸುವ ವ್ಯವಸ್ಥೆಯನ್ನೂ ರೂಪಿಸಲು ಸರ್ಕಾರ ಚಿಂತನೆ ನಡೆಸಿದೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಸೈಬರ್ ಅಪರಾಧಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಇಂತಹ ಕೃತ್ಯಗಳನ್ನು ತಡೆಗಟ್ಟುವುದಕ್ಕೂ ಘಟಕ ಒತ್ತು ನೀಡಲಿದೆ.




