ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್ಗಳ ಸ್ಥಾಪನೆ

2 years ago

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸ್ಥಳೀಯ ಆಹಾರವನ್ನು ಶುಚಿ-ರುಚಿಯಾಗಿ ಕೈಗೆಟುಕುವ ದರದಲ್ಲಿ ಒದಗಿಸುವ ಸದುದ್ದೇಶದಿಂದ ಮಹಿಳೆಯರೇ ನಡೆಸುವ ಕೆಫೆ ಸಂಜೀವಿನಿ ಕ್ಯಾಂಟೀನ್ಗಳನ್ನು ಸ್ಥಾಪಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಬಜೆಟ್ ನಲ್ಲಿ ಹೊಸ ಯೋಜನೆಯನ್ನು ಘೋಷಿಸಿದ ಅವರು, ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿ ಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 7.50 ಕೋಟಿ ರೂ. ವೆಚ್ಚ ಮಾಡಿ 50 ಕೆಫೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದರು.

ಕಾಫಿ ಮಂಡಳಿ ಸಹಭಾಗಿತ್ವದಲ್ಲಿ ಸ್ವಸಹಾಯ ಗುಂಪುಗಳ ಸದಸ್ಯರಾಗಿರುವ ಒಂದು ಲಕ್ಷ ಮಹಿಳೆಯರಿಗೆ ಕಾಫಿ ಉದ್ಯಮಿಗಳಾಗಲು ತರಬೇತಿ ನೀಡಲಾಗುವುದು. 2500 ಕಾಫಿ ಕಿಯೋನಿಕ್ಸ್ಗಳನ್ನ 25 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಿ ಇದರ ಸಂಪೂರ್ಣ ನಿರ್ವಹಣೆಯನ್ನು ಮಹಿಳೆಯರೇ ಮಾಡಲಿದ್ದಾರೆ ಎಂದರು.

ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಕೈಗೆಟುಕುವ ದರದಲ್ಲಿ ರಾತ್ರಿ ತಂಗುವ ವ್ಯವಸ್ಥೆಯನ್ನು ಐದು ನಗರಗಳಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಈ ವಸತಿ ವ್ಯವಸ್ಥೆಯನ್ನು ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ವಹಣೆ ಮಾಡಲಾಗುವುದು. ಸ್ಥಳೀಯ ಮಹಿಳಾ ಸ್ವಸಹಾಯ ಗುಂಪುಗಳ ಸಕ್ರಿಯ ಭಾಗವಹಿಸುವಹಿಕೆ ಮತ್ತು ನಾಯಕತ್ವದೊಂದಿಗೆ ಗ್ರಾಮಪಂಚಾಯ್ತಿ ಮಟ್ಟದ ಆಡಳಿತ ಬಲಪಡಿಸುವ ಉದ್ದೇಶದಿಂದ ಜಿಪಿ-ಎಸ್ಎಚ್ಜಿ ಒಗ್ಗೂಡಿಸುವ ನೀತಿಯನ್ನು ಜಾರಿಗೊಳಿಸುವುದಾಗಿ ಘೋಷಿಸಿದರು.

Leave a Reply