ಬಳ್ಳಾರಿ: ನಗರದ ರೈಲ್ವೇ ನಿಲ್ದಾಣ ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಂಸದರ ನೂತನ ಕಚೇರಿಯನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಂ ಉದ್ಘಾಟಿಸಿದರು.
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
- ರೌಡಿಗಳ ಜೊತೆ ಸೆಲ್ಫಿ, ಡ್ರಗ್ಸ್ ದಂಧೆಗೆ ಬ್ರೇಕ್
- ಅಥಣಿಯಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಅಹವಾಲು, ಕುಂದು ಕೊರತೆ ಆಲಿಸಲು ಮತ್ತು ಜನರ ಜೊತೆ ನೇರ ಸಂಪರ್ಕಕ್ಕೆ ಅಧಿಕೃತ ಕಚೇರಿ ಆರಂಭಿಸಲಾಗಿದೆ ಎಂದರು.
ಕಚೇರಿಯಲ್ಲಿ ಅಗತ್ಯ ಸಿಬ್ಬಂದಿ ನಿಯೋಜನೆ ಮಾಡಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಇತರೆ ಕಾಮಗಾರಿಗಳಿಗೆ ವೇಗಗೊಳಿಸಲಾಗುವುದು ಎಂದರು.
ಯಾವುದೇ ಅವೈಜ್ಞಾನಿಕ ಕಾಮಗಾರಿಗಳಿಗೆ ಅವಕಾಶ ನೀಡುವುದಿಲ್ಲ. ಜನರಿಗೆ ತೊಂದರೆ ನೀಡುವಂತಹ ಯಾವುದೇ ರೈಲ್ವೆ ಅಭಿವೃದ್ಧಿಗೆ ಭೂಮಿ ವಶಪಡಿಸಿಕೊಳ್ಳುವುದಿಲ್ಲ ಎಂದು ಇದೇ ವೇಳೆ ಅವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಡೂರು ಶಾಸಕಿ ಈ.ಅನ್ನಪೂರ್ಣ, ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಸೇರಿದಂತೆ ಹಿರಿಯ ಮುಖಂಡರು, ಪಾಲಿಕೆಯ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು.


