ಬೆಂಗಳೂರು: ದೇಶಾದ್ಯಂತ ಮಾತ್ರವಲ್ಲದೆ ನೆರೆಯ ಪಾಕಿಸ್ತಾನದಲ್ಲೂ ಸುದ್ದಿ ಮಾಡಿದ ಬೆಂಗಳೂರಿನ ಕೋಗಿಲು ಬಡಾವಣೆ ಅಕ್ರಮ ವಲಸಿಗರ ತೆರವು ಮತ್ತು ಪುನರ್ವಸತಿ ಯೋಜನೆ ವಿವಾದ ಇದೀಗ ರಾಜ್ಯ ಸರ್ಕಾರದಲ್ಲಿ ತೀವ್ರ ಬಿಕ್ಕಟ್ಟಿಗೆ ಕಾರಣವಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ವಿವಾದಕ್ಕೆ ಕಾರಣವಾದ ಕೋಗಿಲು ಬಡಾವಣೆ, ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರ ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಗೆ ಬರಲಿದೆ. ಹೀಗಾಗಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಸ್ಥಳೀಯ ಶಾಸಕರ ನಿರ್ಧಾರ ಪ್ರಮುಖವಾಗಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಕಂದಾಯ ಸಚಿವರೂ ಆಗಿರುವ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ಅಭಿಪ್ರಾಯಕ್ಕೆ ಕಾದು ಕುಳಿತಿದ್ದಾರೆ.
ವಿದೇಶ ಪ್ರವಾಸಕ್ಕೆ ತೆರಳಿದ್ದ ಕೃಷ್ಣಭೈರೇಗೌಡ ಅವರು, ಬೆಂಗಳೂರಿಗೆ ಆಗಮಿಸಿದ್ದು ಅಧಿಕಾರಿಗಳಿಂದ ವಿವಾದ ಕುರಿತಾಗಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಅಂತಿಮವಾಗಿ ಒತ್ತುವವರಿ ತೆರವು ಕಾರ್ಯಾಚರಣೆ ಪರವಾಗಿ ನಿಲುವು ತೆಗೆದುಕೊಂಡಿರುವ ಅವರು, ಇಲ್ಲಿನ ಅಕ್ರಮವಾಸಿಗಳಿಗೆ ವಿಶೇಷ ಅನುಕಂಪದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅತಿಕ್ರಮಣ ಪ್ರವೇಶ ಆರೋಪ ಅಡಿಯಲ್ಲಿ ಇಲ್ಲಿಂದ ತೆರವು ಮಾಡಿರುವ ಕುಟುಂಬಗಳಿಗೆ ಮಾನವೀಯತೆಯ ಆಧಾರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಮನೆ ನಿರ್ಮಾಣ ಮಾಡಿಕೊಡಲು ತಮ್ಮ ಅಭ್ಯಂತರವಿಲ್ಲ. ಆದರೆ ಇದಕ್ಕೆ ತಗಲುವ ವೆಚ್ಚದಲ್ಲಿ ಶೇಕಡ 75 ರಷ್ಟನ್ನು ಸರ್ಕಾರ ಭರಿಸುವ ಪ್ರಸ್ತಾವನೆಗೆ ತಮ್ಮ ವಿರೋಧವಿದೆ. ಅಲ್ಲದೆ ಈಗಾಗಲೇ ವಸತಿ ಕೋರಿ ಅರ್ಜಿ ಸಲ್ಲಿಸಿರುವ ಎಲ್ಲರ ಮನವಿಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ ಅರ್ಹರಿಗೆ ಸೌಲಭ್ಯ ಕಲ್ಪಿಸಬೇಕು. ಕೋಗಿಲು ಬಡಾವಣೆ ನಿವಾಸಿಗಳು ಸಂತ್ರಸ್ತರು ಎಂಬ ವಿಶೇಷ ಪ್ರಕರಣವಾಗಿ ಇದನ್ನು ಪರಿಗಣಿಸಬಾರದು. ಎಲ್ಲಾ ವಸತಿ ಹೀನರ ರೀತಿಯಲ್ಲಿಯೇ ಇವರನ್ನು ಪರಿಗಣಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹೀಗಾಗಿ ಇಲ್ಲಿನ ನಿವಾಸಿಗಳ ಬಗ್ಗೆ ವಿಶೇಷ ಪ್ರಕರಣವೆಂದು ಪರಿಗಣಿಸಲು ವಾದ ಮಂಡಿಸುತ್ತಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಳೀಯ ಶಾಸಕ ಕೃಷ್ಣ ಬೈರೇಗೌಡ ಅವರ ನಿಲುವು ಆಘಾತ ತಂದಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಸಚಿವರ ನಿವಾಸಕ್ಕೆ ತಮ್ಮ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ಅವರನ್ನು ಕಳುಹಿಸಿರುವ ಜಮೀರ್ ಅಹಮದ್ ಖಾನ್ ಸಚಿವರ ಮನವೊಲಿಸುವಂತೆ ಸೂಚಿಸಿದ್ದಾರೆ. ಅದರಂತೆ ಕಂದಾಯ ಸಚಿವರೊಂದಿಗೆ ವಸತಿ ಸಚಿವರ ಆಪ್ತ ಕಾರ್ಯದರ್ಶಿ ಸುದೀರ್ಘ ಮಾತುಕತೆ ನಡೆಸಿದರು.
ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಮಂತ್ರಿ ಕೃಷ್ಣ ಭೈರೇಗೌಡ, ಬಿಬಿಎಂಪಿ ಇರಲಿ, ಕಂದಾಯ ಇಲಾಖೆ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸವಾಗಿದೆ. ಈಗ ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಹೀಗಾಗಿ ಒತ್ತುವರಿ ಮಾಡಿಕೊಂಡವರು ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕು ಪತ್ರ ನೀಡಲು ಸಾಧ್ಯವಿಲ್ಲ ಎಂದರು.
ಇದು ಒಂದೇ ಪ್ರಕರಣ ಅಲ್ಲ, ಬೇರೆ ಪ್ರಕರಣ ಇದೆ. ಸರ್ಕಾರಿ ಜಾಗವನ್ನು ಭದ್ರ ಮಾಡಲು ತೆರವು ಮಾಡಲಾಗಿದೆ. ತೆರವಾದ ಜಾಗದಲ್ಲಿ ಬಡವರು, ಅರ್ಹರು ಇದ್ದಾರೆ. ಬಹಳ ಕಾಲದಿಂದ ವಾಸ ಮಾಡುತ್ತಿದ್ದಾರೆ ಎನ್ನುವ ಕಾರಣದಿಂದ ಮಾನವೀಯ ದೃಷ್ಟಿಯಿಂದ ಬಡವರಿಗೆ ಮನೆ ನೀಡಲು ಸಿಎಂ ನಿರ್ಧಾರ ಮಾಡಿದ್ದಾರೆ ಎಂದರು.
ಈ ಪ್ರದೇಶದಲ್ಲಿ ಬಾಂಗ್ಲಾದೇಶಕ್ಕೆ ಸೇರಿದ ಯಾವುದೇ ನಿವಾಸಿಗಳು ಇಲ್ಲ. ಈ ಬಗ್ಗೆ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಈ ಪ್ರದೇಶದಲ್ಲಿ ಅಕ್ರಮವಾಗಿ ವಾಸಿಸಲು ಅವಕಾಶ ಮಾಡಿಕೊಟ್ಟವರು ಯಾರೇ ಇದ್ದರೂ ಕೂಡ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಅಂತವರು ತಮ್ಮ ಆಪ್ತನೇ ಇರಲಿ, ಇಲ್ಲವೇ ಬಿಜೆಪಿ ಕಾರ್ಯಕರ್ತನಾಗಿರಲಿ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದರು.
ಸಂಧಾನ ಸಭೆ: ಇದಾದ ನಂತರ ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ಕುರಿತು ವಸತಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ಕೃಷ್ಣ ಬೈರೇಗೌಡ ಮತ್ತು ಜಮೀರ್ ಅಹ್ಮದ್ ಖಾನ್ ಸಭೆ ನಡೆಸಿದರು.
ಸಭೆಯಲ್ಲಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪುನರ್ವಸತಿ ಕಲ್ಪಿಸಲು ನಡೆಯುತ್ತಿದ್ದ ಚರ್ಚೆಗೆ ಇತಿಶ್ರೀ ಹಾಡಲಾಯಿತು. ಅಕ್ರಮ ಒತ್ತುವರಿ ದಾರರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ವಸತಿ ರಹಿತ ಕರ್ನಾಟಕದ ಪ್ರಜೆಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲು ತೀರ್ಮಾನಿಸಲಾಯಿತು.
ಸರ್ಕಾರಿ ಜಮೀನಲ್ಲಿ ಯಾರಿಗೋ ಹಣ ಕೊಟ್ಟು ಒತ್ತುವರಿ ಮಾಡ್ತಾರೆ ಅಂದ್ರೆ ಏನು ಹೇಳಬೇಕು. ಅಲೆಮಾರಿಗಳಿಗೆ ಭೂ ಒತ್ತುವರಿ ಅಗತ್ಯ ಇಲ್ಲ. ಅವರು ಬರ್ತಾರೆ ಹೋಗ್ತಾರೆ. ಆದ್ರೆ ಭೂ ಒತ್ತುವರಿದಾರರನ್ನು ಸಹಿಸಲು ಸಾಧ್ಯವಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ನಿರ್ಧರಿಸಲಾಯಿತು.
ಸರ್ಕಾರಿ ಜಮೀನಲ್ಲಿ ಶೆಡ್ ಹಾಕಿದ ಕೂಡಲೇ ಅವರಿಗೆ ಮನೆ ಕೊಟ್ಟರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಸರ್ಕಾರಿ ಜಮೀನು ಒತ್ತುವರಿಗೆ ನಾವೇ ಪರೋಕ್ಷ ಕುಮ್ಮಕ್ಕು ಕೊಟ್ಟಂತಾಗುತ್ತದೆ. ಎಷ್ಟೋ ಜನ ಸರ್ಕಾರಿ ಮನೆಗಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವಾಗ ಹೀಗೆ ಒತ್ತುವರಿದಾರರಿಗೆ ಏಕಾಏಕಿ ಮನೆ ನೀಡುವುದು ಸರಿಯಲ್ಲ ಎಂದು ತೀರ್ಮಾನಿಸಲಾಯಿತು.
ಆದರೆ, ಕೋಗಿಲು ಕ್ರಾಸ್ ಪ್ರಕರಣದಲ್ಲಿ ಬಡವರಿಗೆ ಮಾನವೀಯತೆ ಅಡಿಯಲ್ಲಿ ಮನೆ ನೀಡಬೇಕು ನಿಜ. ಆದರೆ, ಆ ಕೆಲಸ ಕಾನೂನುಬದ್ಧವಾಗಿಯೇ ಆಗಬೇಕು. ಇಲ್ಲಿ ಗುಡಿಸಲು ಹಾಕಿರುವವರು ಎಲ್ಲಿಂದ ಬಂದರು ಎಂಬ ಬಗ್ಗೆ ಮೊದಲು ತನಿಖೆ ಆಗಬೇಕು. ಉತ್ತರ ಪ್ರದೇಶ ಹಾಗೂ ಬಿಹಾರದ ಐದಾರು ಕುಟುಂಬಗಳೂ ಸಹ ಇಲ್ಲಿರುವ ಮಾಹಿತಿ ಇದೆ. ಆದರೆ, ಅರ್ಹರಿಗೆ ಮಾತ್ರ ಮನೆ ನೀಡಬೇಕು. ಕರ್ನಾಟಕದ ಇತರೆ ಭಾಗಗಳಿಂದ ಬೆಂಗಳೂರಿಗೆ ಬಂದು ನೆಲೆಸಿದ್ದರೆ ಅಂತವರಿಗೆ ಮೊದಲ ಆದ್ಯತೆಯಾಗಿ ಮನೆ ನೀಡಲು ಪರಿಗಣಿಸಬೇಕು ಎಂಬ ಅಭಿಪ್ರಾಯಕ್ಕೆ ಬರಲಾಯಿತು.
ಕರ್ನಾಟಕದವರು ಕನ್ನಡಿಗರು ಅಲ್ಲದಿದ್ದು 5 ವರ್ಷ ಕರ್ನಾಟಕದಲ್ಲಿ ನೆಲೆಸಿದ್ದರೆ ಅಂತವರು ಬಡವರಿಗೆ 1 ಲಕ್ಷ ಮನೆ ನೀಡುವ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿ ಮನೆ ಪಡೆಯಲಿ ಎಂದು ನಿರ್ಧರಿಸಲಾಯಿತು.




