ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ಕೂಡ ಆ ಶಾಲೆಯನ್ನು ಮುಚ್ಚುವುದಿಲ್ಲ: ಮಧು ಬಂಗಾರಪ್ಪ

10 months ago

ಬೆಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ಸುದ್ದಿಗಳಿಗೆ ತೆರೆ ಎಳೆದಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಲೆಯಲ್ಲಿ ಓರ್ವ ವಿದ್ಯಾರ್ಥಿ ಇದ್ದರೂ ಕೂಡ ಆ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಬದಲಿಗೆ ಅವುಗಳನ್ನು ಸಬಲಗೊಳಿಸುವ ಕಡೆ ತಮ್ಮ ಸರ್ಕಾರ ಗಮನ ಹರಿಸಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಈ ಕಾರಣಕ್ಕೆ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿಲ್ಲ ಇದನ್ನು ನಿವಾರಿಸುವ ದೃಷ್ಟಿಯಿಂದ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿ ವಿದ್ಯಾರ್ಥಿಗಳ ಪ್ರವೇಶಾವಕಾಶ ಹೆಚ್ಚಳವಾಗುವಂತೆ ನೋಡಿಕೊಳ್ಳಲಾಗುವುದು ಎಂದರು.

ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಮುಂಬಡ್ತಿಗೆ ಒಳ ಮೀಸಲಾತಿ ಪ್ರಕ್ರಿಯೆ ಅಡ್ಡಿಯಾಗಿದೆ. ಈ ಬಗ್ಗೆ ತೀರ್ಮಾನ ಕೈಗೊಂಡ ನಂತರ ಖಾಲಿ ಇರುವ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಈ ವೇಳೆ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.

ಹೊಸದಾಗಿ 15 ಸಾವಿರ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಬೇಕಾಗಿದ್ದು, ಒಳ ಮೀಸಲಾತಿ ನೀಡುವ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇದಕ್ಕೆ ಚಾಲನೆ ನೀಡಲಾಗುವುದು ಎಂದರು.

ಒಳ ಮೀಸಲಾತಿ ವಿಚಾರ ಇದೀಗ ನಿರ್ಣಾಯಕ ಘಟ್ಟ ತಲುಪಿದೆ. ಇದು ಮುಗಿದ ಕೂಡಲೇ ಮೂರು ತಿಂಗಳ ಒಳಗಾಗಿ ಕಾಲ ಇರುವ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು. ಹೇಳಿದರು
ಶಿಕ್ಷಕರ ಕೊರತೆ ಹಲವಾರು ಶಾಲೆಗಳಲ್ಲಿ ಕಂಡುಬಂದಿದ್ದು,ಇದು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಇದನ್ನು ನಿವಾರಿಸಲು ಅತಿಥಿ ಶಿಕ್ಷಕರ ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದರು.

ಸರ್ಕಾರಿ ಶಾಲೆಗಳ ಸುಧಾರಣೆಗೆ ಒತ್ತು ನೀಡಲಾಗಿದೆ. ಎಸ್ ಎಸ್ ಎಲ್ ಸಿ ಗೆ  ಮೂರು ಬಾರಿ ಪರೀಕ್ಷೆ ನಡೆಸುವ ಪದ್ಧತಿ ಜಾರಿಗೊಳಿಸಿರುವುದರಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಿದೆ‌. ಈ ಬಾರಿ ಎರಡು ಹಾಗೂ ಮೂರನೇ ಪರೀಕ್ಷೆಯಲ್ಲಿ 51 ವಿದ್ಯಾರ್ಥಿಗಳು ಶೇ  625ಕ್ಕೆ 625 ಅಂಕಗಳಿಸಿದ್ದಾರೆ ಎಂದು ತಿಳಿಸಿದರು.
ರಾಜ್ಯದ ಯಾವುದೇ ಪ್ರದೇಶದಲ್ಲೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಒಂದು ಶಾಲೆಯಲ್ಲಿ ಓರ್ವ ವಿದ್ಯಾರ್ಥಿ ಇದ್ದರೂ ಶಾಲೆ ಮುಚ್ಚುವುದಿಲ್ಲ ಎಂದರು.

ಹೊಸ ಶಿಕ್ಷಕರ ನೇಮಕಾತಿಯಿಂದ ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸಲಾಗುವುದು ಎಂದರು.

Leave a Reply