ಬೆಂಗಳೂರು: ಕೆಂಪೇಗೌಡರು ಒಕ್ಕಲಿಗರಾದರೂ ಅವರನ್ನು ಒಂದು ಜಾತಿಗೆ ಸೀಮಿತ ಮಾಡಬಾರದು. ವಿಶ್ವಮಾನ್ಯ ಬೆಂಗಳೂರನ್ನು ಕಟ್ಟಿದ ಅವರು ಎಲ್ಲಾ ಜಾತಿ, ಧರ್ಮಕ್ಕೂ ನಾಡಪ್ರಭುಗಳಾಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
- ಚುನಾವಣೆಯಲ್ಲಿ ಸೋಲುವ ಭಯದಿಂದ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅನುಮಾನ: ಆರ್.ಅಶೋಕ
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ನಾಡಪ್ರಭುಗಳ ಹೆಸರನ್ನು ಉಳಿಸಿ, ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ. ಶಿಕ್ಷಣ ಇಲಾಖೆಯಿಂದ ಎಲ್ಲಾ ಶಾಲೆಗಳಲ್ಲಿ ಕೆಂಪೇಗೌಡರ ಬಗ್ಗೆ ಚರ್ಚಾ ಸ್ಪರ್ಧೆ ನಡೆಸಲು ಹಾಗೂ ತಿಳುವಳಿಕೆ ನೀಡಲು ಪ್ರತಿ ತಾಲ್ಲೂಕಿಗೆ ಬಿಬಿಎಂಪಿಯಿಂದ ತಲಾ 1 ಲಕ್ಷ ಹಣ ಬಿಡುಗಡೆ ಮಾಡಲಾಗಿದೆ. ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಪ್ರಧಾನ ಕಾರ್ಯದರ್ಶಿಗಳು ಮುಂದಿನ ದಿನಗಳಲ್ಲಿ ತಿಳಿಸಲಿದ್ದಾರೆ ಎಂದರು.
ಸರ್ಕಾರದಿಂದ ಸುಮಾರು 25ಕ್ಕೂ ಹೆಚ್ಚು ಜಯಂತಿಗಳನ್ನು ಆಚರಿಸಲಾಗುತ್ತದೆ. ಈಗ ನೀಡುತ್ತಿರುವ ಹಣ ಕಡಿಮೆಯಾಗುತ್ತಿದ್ದು, ಆದ ಕಾರಣ ನಾಡಪ್ರಭುಗಳ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಪ್ರತಿ ತಾಲ್ಲೂಕು ಮಟ್ಟಕ್ಕೂ ಬಿಬಿಎಂಪಿಯಿಂದ 1 ಲಕ್ಷ ರೂಪಾಯಿ ನೀಡಲು ಸೂಚನೆ ನೀಡಲಾಗಿದೆ ಎಂದರು.
ನಾಡಪ್ರಭು ಕೆಂಪೇಗೌಡರ ಜಯಂತಿಗೆ ಪ್ರತಿ ಸಮುದಾಯದ ಗುರುಗಳನ್ನು ಆಹ್ವಾನಿಸಿಬೇಕು. ಇವರು ಜಾತಿ- ಧರ್ಮಗಳನ್ನು ಮೀರಿದ ನಾಯಕ. ಕೇವಲ ಒಂದು ಸಮುದಾಯಕ್ಕೆ ಸೇರಿದವರಲ್ಲ. ಪ್ರತಿ ಆಚಾರ, ವಿಚಾರ ವೃತ್ತಿ, ಸಮಾಜ, ಸಮುದಾಯಗಳನ್ನು ಕಾಪಾಡಿಕೊಂಡು ಬರುತ್ತಿದ್ದವರು ಇವರು ಎಂದರು.
ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳುತ್ತಾರೆ. ಅದೇ ರೀತಿ ನಾವು ಮತ್ತು ಮುಂದಿನ ಪೀಳಿಗೆ ಕೆಂಪೇಗೌಡರನ್ನು ಮರೆಯಬಾರದು. ಒಬ್ಬ ವ್ಯಕ್ತಿ ಹಿಂದೆ ಎಷ್ಟು ಜನ ಇರುತ್ತಾರೆ ಎನ್ನುವುದು ಮುಖ್ಯವಲ್ಲ. ಅವರ ಸಾಧನೆ ಹಾಗೂ ಎಷ್ಟು ಜನರ ಬದುಕನ್ನು ಬದಲಾಯಿಸಿದ್ದಾರೆ ಎನ್ನುವುದು ಮುಖ್ಯ. ಇದು ಕೆಂಪೇಗೌಡರ ಜೀವನದಲ್ಲಿ ನಿಜವಾಗಿದೆ ಎಂದರು.




