ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಮತ್ತೊಮ್ಮೆ ವಿದ್ಯಮಾನಗಳು ಚುರುಕು ಪಡೆದುಕೊಂಡಿವೆ. ಡಿಸಿಎಂ ಡಿ ಕೆ ಶಿವಕುಮಾರ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದು ಕುತೂಹಲ ಮೂಡಿಸಿದರೆ, ಸಿಎಂ ಸಿದ್ದರಾಮಯ್ಯ ಪಾಟ್ನಾಗೆ ತೆರಳುತ್ತಿದ್ದು ಬುಧವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆ ಕೆಪಿಸಿಸಿ ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡು ವರ್ಷ ಅಧಿಕಾರ ಅವಧಿ ಪೂರ್ಣಗೊಳಿಸಿದೆ. ಹೀಗಾಗಿ ಉಳಿದಿರುವ ಅವಧಿಯಲ್ಲಿ ಇಲ್ಲಿಯವರೆಗೆ ಮಂತ್ರಿ ಸ್ಥಾನ ದೊರಕದ ಅರ್ಹರಿಗೆ ಸಂಪುಟದಲ್ಲಿ ಸ್ಥಾನ ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಬರುವ ನವೆಂಬರ್ ನಲ್ಲಿ ಸಿದ್ದರಾಮಯ್ಯ ನೇತೃತ್ವ ಸಂಪುಟ ಸಂಪೂರ್ಣ ರಚನೆಯಾಗಲಿದ್ದು, ಹಲವು ಆಕಾಂಕ್ಷಿಗಳು ಈಗಾಗಲೇ ಸಂಪುಟ ಸೇರ್ಪಡೆಗೆ ಕಸರತ್ತು ನಡೆಸಿದ್ದಾರೆ. ಈ ಕುರಿತು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್, ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆಯಾಗಲಿದೆ. ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನದಿಂದ ಹೊರ ಬಂದವರಿಗೆ ಪಕ್ಷದ ಕೆಲಸ ವಹಿಸಲಾಗುತ್ತದೆ. ಇನ್ನು ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಸಾಧ್ಯತೆಗಳಿದ್ದು, ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡಿಲ್ಲ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದರು.




