ಧಾರವಾಡ: ಜಿಲ್ಲೆಯಲ್ಲಿ ಸೆ. 22ರ ಸೋಮವಾರದಿಂದ ಆರಂಭವಾಗುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪ್ರತಿಯೊಂದು ಕುಟುಂಬವು ಭಾಗವಹಿಸಿ, ಅಗತ್ಯ ಮಾಹಿತಿ ನೀಡುವ ಮೂಲಕ ಸಮೀಕ್ಷೆಗೆ ಸಹಕಾರ ನೀಡಬೇಕೆಂದು ಜಿಲ್ಲಾ ಸಮನ್ವಯ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ ಮಾಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಮೀಕ್ಷೆದಾರರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಹಂತದಲ್ಲಿ ತರಬೇತಿ ನೀಡಲಾಗಿದೆ. ಸಮೀಕ್ಷೆ ಮಾಡುವ ಮನೆಗಳಿಗೆ ಈಗಾಗಲೇ ಸ್ಟಿಕರ್ ಸಹ ಆಂಟಿಸಿ, ಸಮೀಕ್ಷೆಗಾಗಿ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಮೀಕ್ಷೆ ಮುಗಿಯುವವರೆಗೆ ಮನೆ ಬಾಗಿಲಿಗೆ ಅಂಟಿಸಿರುವ ಸ್ಟಿಕರ್ ತೆಗೆಯಬಾರದು. ಸಮೀಕ್ಷೆದಾರರು ಮನೆಗೆ ಬಂದಾಗ ಕುಟುಂಬದ ಎಲ್ಲ ಸದಸ್ಯರು ಶಿಕ್ಷಣ, ಉದ್ಯೋಗ, ಸೌಲಭ್ಯ ಪಡೆದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ, ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಜರುಗುವಂತೆ ಸಹಕರಿಸಬೇಕೆಂದು ಅವರು ಹೇಳಿದ್ದಾರೆ.
ಈಗಾಗಲೇ ಸಮೀಕ್ಷೆ ಮಾಡುವ ಮನೆಗಳಿಗೆ ಸ್ಟಿಕ್ಕರ್ ಅಂಟಿಸುವಿಕೆ ಹಾಗೂ ಗಣತಿದಾರರಿಗೆ ಯಾವ ಮನೆಗಳ ಸಮೀಕ್ಷೆ ಮಾಡಬೇಕೆಂಬ ಹೊಣೆಗಾರಿಕೆ ನಿಗದಿ ಮಾಡಲಾಗಿದೆ. ಮತ್ತು ಅವರಿಗೆ ತರಬೇತಿಯನ್ನೂ ಸಹ ನೀಡಲಾಗಿದೆ. ಒಂದು ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ, ಪಡಿತರ ಚೀಟಿವಾರು ಪ್ರತ್ಯೇಕ ಕುಟುಂಬವೆಂದು ಪರಿಗಣಿಸಿ ಸಮೀಕ್ಷೆ ನಡೆಸಲಾಗುವುದು. ಜಿಲ್ಲೆಯಲ್ಲಿ ಅಂದಾಜು 5,46,012 ಕುಟುಂಬಗಳ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಒಬ್ಬ ಸಮೀಕ್ಷೆದಾರ ಗರಿಷ್ಠ 150 ಕುಟುಂಬಗಳಿಗೆ ಭೇಟಿ ನೀಡಿ, ಮಾಹಿತಿ ದಾಖಲಿಸಲಿದ್ದಾರೆ. 4,880 ಗಣತಿದಾರರು ಸೆ.22 ರಿಂದ ಅ.7 ರ ವರೆಗೆ ಅಂದಾಜು 5,46,012 ಕುಟುಂಬಗಳ ಸಮೀಕ್ಷೆ ಮಾಡಲಿದ್ದಾರೆ. ಕುಟುಂಬಸ್ಥರು ಅಗತ್ಯ ಮಾಹಿತಿ ನೀಡಿ, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲು ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಸೆ.22 ರಿಂದ ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಿದ್ಧತೆಯಲ್ಲಿ ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಗಣತಿದಾರರು ತೊಡಗಿದ್ದರು.








