ಗೃಹಜೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಯೋಜನೆಯಿಂದ ಸರ್ವರಿಗೂ ಲಾಭ: ದಿನೇಶ್ ಗುಂಡೂರಾವ್

3 years ago

#Everyone #benefits #Grihajoti #Grilahakshmi #Annabhagya #Yuvanidhi #Yojana #DineshGundurao #kpcc #election

ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ: ದಿನೇಶ್ ಗುಂಡೂರಾವ್

ಗೃಹಜೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಯೋಜನೆಯಿಂದ ಸರ್ವರಿಗೂ ಲಾಭ: ದಿನೇಶ್ ಗುಂಡೂರಾವ್

ಬೆಂಗಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸುಭಾಶ್ ನಗರ ವಾರ್ಡ್ ಕಾಂಗ್ರೆಸ್ ಕಛೇರಿ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ದಿನೇಶ್ ಗುಂಡೂರಾವ್, ಮಹಾನಗರ ಪಾಲಿಕೆ ಮಾಜಿ ಸದಸ್ಯರು, ನಗರ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ  ಟಿ.ಮಲ್ಲೇಶ್ ಮೊದಲಾದವರು ಭಾಗವಹಿಸಿದ್ದರು.

ದಿನೇಶ್ ಗುಂಡೂರಾವ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಬಡವರ ಪರ ಇರುವ ಪಕ್ಷ. ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಜನತೆಗೆ 200 ಯೂನಿಟ್ ವಿದ್ಯುತ್, ಮನೆಯ ಯಾಜಮಾನಿಗೆ 2000 ಸಹಾಯಧನ ಮತ್ತು ಪ್ರತಿ ವ್ಯಕ್ತಿಗೆ 10 ಕೆ.ಜಿ.ಅಕ್ಕಿ ಉಚಿತ ಮತ್ತು ನಿರುದ್ಯೋಗ ಭತ್ಯೆ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಮತ್ತು ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಸಿದ್ದಾಂತದಂತೆ ನಡೆಯುತ್ತದೆ. ನಮ್ಮ ಪಕ್ಷದ ನಾಲ್ಕು ಯೋಜನೆಗಳಿಂದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಸರೆಯಾಗುತ್ತದೆ ಮತ್ತು ಅವರು ಆರ್ಥಿಕವಾಗಿ ಸಬಲರಾಗುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗುತ್ತದೆ ಎಂದು ಹೇಳಿದರು.

ಟಿ.ಮಲ್ಲೇಶ್ ಮಾತನಾಡಿ, ಶಾಸಕರಾದ ದಿನೇಶ್ ಗುಂಡೂರಾವ್ ರವರು ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟು ಅಭಿವೃದ್ಧಿ ಕೆಲಸ ನೋಡಿ ಮತ ನೀಡಿ ಎಂದು ಪ್ರತಿ ಮತದಾರರ ಮನೆಗೆ ತೆರಳುತ್ತೇವೆ ಎಂದು ಹೇಳಿದರು.

ಎಲ್ಲ ವರ್ಗ ಮತ್ತು ಧರ್ಮದವರನ್ನ  ಸರಿಸಮಾನವಾಗಿ ಕಾಣುವ ಶಾಸಕರಾದ ದಿನೇಶ್ ಗುಂಡೂರಾವ್ ರವರು ಜಾತ್ಯತೀತ ಸಿದ್ದಾಂತದ ನಾಯಕ. ಗಾಂಧಿನಗರ ವಿದಾನಸಭಾ ಕ್ಷೇತ್ರದಲ್ಲಿ ದಿನೇಶ್ ಗುಂಡೂರಾವ್ ರವರು ಅತ್ಯಧಿಕ ಮತದಿಂದ ಜಯಗಳಿಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ರಘು, ಭಾನು, ರಾಜ್ ಕಾರ್ತಿಕ್ ಮತ್ತು ಮಲ್ಲೇಶ್ ಹೆಲ್ಪಿಂಗ್ ಟೀಂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply