ಬಳ್ಳಾರಿ: ಸದಾಯದಲ್ಲಿ ಹೆಚ್ಐವಿ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್ ಹೊಸಮನೆ ಹೇಳಿದರು.
ವಿಮುಕ್ತಿ ಏಡ್ಸ್ ತಡೆಗಟ್ಟುವ ಮಹಿಳಾ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಬಿಡಿಎಎ ಪುಟ್ಬಾಲ್ ಸಭಾಂಗಣದಲ್ಲಿ ಅಖಂಡ ಜಿಲ್ಲೆಯ ದಮನಿತ ಮಹಿಳೆಯರಿಗೆ ಏರ್ಪಡಿಸಿದ್ದ ಹೆಚ್ಐವಿ ಮತ್ತು ಏಡ್ಸ್ ಕುರಿತ ವಿಶೇಷ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಕಳೆದ 40 ವರ್ಷಗಳಿಂದ ಭಾರತ ಸೇರಿದಂತೆ ಜಗತ್ತಿನ ಹಲವು ಷ್ಟ್ರಗಳಲ್ಲಿ ಕಾಡುತ್ತಿರುವ ಹೆಚ್ಐವಿ ಏಡ್ಸ್ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಭಾಗಿಯಾಗುವ ಮೂಲಕ ತಳಮಟ್ಟದಿಂದಲೇ ಹೆಚ್ಐವಿ ನಿರ್ಮೂಲನೆಗೆ ಪಣತೊಡಬೇಕಿದೆ ಎಂದರು.
ಜೀವನದ ಆಕಸ್ಮಿಕ ಘಟನೆಗಳಿಂದ ಅಥವಾ ಹೆಚ್ಐವಿ ಹರಡುವ ಮಾರ್ಗಗಳಲ್ಲಿ ನಿರ್ಲಕ್ಷ್ಯ ವಹಿಸಿದರೆ ಯಾರಿಗಾದರೂ ಹೆಚ್ಐವಿ ಹರಡುವ ಸಾಧ್ಯತೆಗಳಿವೆ. ಒಮ್ಮೆ ಹೆಚ್ಐವಿ ವೈರಸ್ ದೇಹದಲ್ಲಿ ಕಂಡುಬಂದರೆ ಜೀವನ ಪರ್ಯಂತ ಹೆಚ್ಐವಿ ಬಾಧಿತರಾಗಿ ಇರುವ ಸನ್ನಿವೇಶ ಉಂಟಾಗುವುದಿರಿಂದ ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಹೆಚ್ಐವಿ ಮುಕ್ತ ಸಮಾಜ ನಿರ್ಮಿಸಬೇಕು ಎಂದು ಕರೆನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಮಾತನಾಡಿ, ಯುವ ಜನತೆಯಲ್ಲಿ ಹೆಚ್ಐವಿಯಿಂದಾಗುವ ಪರಿಣಾಮ ಹಾಗೂ ಹರಡುವಿಕೆಯ ಮತ್ತು ಏಡ್ಸ್ ತಡೆಗಟ್ಟುವ ಕುರಿತು ಅರಿವು ಮೂಡಿಸುವ ಮುಖಾಂತರ ಸ್ವಾಸ್ತ ಸಮಾಜ ನಿರ್ಮಾಸಲು ಶ್ರಮಿಸೋಣ ಎಂದು ಕರೆನೀಡಿದರು.
ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಹೆಚ್ಐವಿ ಸೋಂಕು ಹರಡುವಿಕೆಯನ್ನು ತಡೆಗಟ್ಟಲು ವಿಮುಕ್ತಿ ಸಂಘ ನಿರಂತರವಾಗಿ ಜಾಗೃತಿ ನೀಡುವುದರ ಜೊತೆಗೆ ಸರಿಯಾದ ಸಮಯದಲ್ಲಿ ದಮನಿತ ಮಹಿಳೆಯರ ಆರೋಗ್ಯ ತಪಾಸಣೆ ಕೈಗೊಳ್ಳುವುದು. ಸರ್ಕಾರದ ವಸತಿ ಯೋಜನೆಗಳಲ್ಲಿ ಮನೆ ಒದಗಿಸುವುದು, ಆರ್ಥಿಕ ಸೌಲಭ್ಯಗಳನ್ನು ಒದಗಿಸಲು ವಿವಿಧ ಇಲಾಖೆಗಳ ಸಹಾಯ ಧನಗಳ ಯೋಜನೆಗಳ ಪರಿಚಯಿಸುವುದು, ಪಡಿತರ ಚೀಟಿಗಳ ಒದಗಿಸುವಿಕೆಯಂತಹ ಸಾಮಾಜಿಕ ಸೇವಾ ಸೌಲಭ್ಯಗಳನ್ನು ನೀಡುವ ಜೊತೆಗೆ ಹೆಚ್ಐವಿ ಕುರಿತ ಕಳಂಕ ತಾರತಮ್ಯಗಳನ್ನು ದೂರ ಮಾಡುವ ದಿಶೆಯಲ್ಲಿ ಸಮುದಾಯದಲ್ಲಿ ಜಾಗೃತಿ ನೀಡುತ್ತಿರುವುದು ಶ್ಲಾಘನೀಯ. ಪ್ರಸ್ತುತ ಸಂಘದ ಸದಸ್ಯರ ಸಂಖ್ಯೆ 3166ಕ್ಕೆ ತಲುಪಿರುವುದೇ ಸಾಕ್ಷಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಇಂದ್ರಾಣಿ.ವಿ., ವಿವಿಯ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಡಾ.ಗೌರಿ ಎಮ್.ಎಮ್, ವಿಮುಕ್ತಿ ಸಂಘದ ದುರುಗಮ್ಮ, ಡಾ.ರಾಘವೇಂದ್ರ, ಡಾ.ದಿನೇಶ್ ಗುಡಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ.ಹೆಚ್ ದಾಸಪ್ಪನವರ ಸೇರಿದಂತೆ ಇತರರು ಹಾಜರಿದ್ದರು.




