ಎಲ್ಲವೂ ಕ್ರಮಬದ್ಧವಾಗಿ ಕಾನೂನಾತ್ಮಕವಾಗಿ ನಡೆದಿದ್ದು ಯಾವುದೇ ರೀತಿಯ ಒತ್ತುವರಿ ನಡೆದಿಲ್ಲ: ಡಾ.ಸಿ.ಎನ್.ಮಂಜುನಾಥ್
ಬೆಂಗಳೂರು: 1996 ರಲ್ಲಿ ನಮ್ಮ ತಂದೆಯವರಾದ ಶ್ರೀ ನಂಜಪ್ಪ ಉರುಫ್ ಚಾಮರಾಜೇಗೌಡ ಅವರು ಕೇತಗಾನಹಳ್ಳಿಯಲ್ಲಿ 03 ಎಕರೆ 25 ಗುಂಟೆ ಜಮೀನನ್ನು ಕ್ರಮಬದ್ಧವಾಗಿ ಖರೀದಿಸಿರುತ್ತಾರೆ ಎಂದು ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಹೇಳಿದ್ದಾರೆ.
- ಗಮನ ಬೇರೆಡೆ ಸೆಳೆದು ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ: ಪ್ರಕಾಶ್ ರಾಜ್
- ಪ್ರಜಾಪ್ರಭುತ್ವದಲ್ಲಿ ಪ್ರಧಾನಿಯೂ ವ್ಯಂಗ್ಯಕ್ಕೆ ಅತೀತರಲ್ಲ
- ಹಾಲಿನ ದರ ಏರಿಕೆ ಕುರಿತು ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಡಿ ಕೆ ಶಿವಕುಮಾರ್
- ಒಂದು ತಿಂಗಳ ಸಂಬಳವನ್ನು ಬರ ಪರಿಹಾರ ನಿಧಿಗೆ ನೀಡಿ
- ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ತಮ್ಮ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ ಮತ್ತು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಭೂ ಕಬಳಿಕೆ ಮಾಡಿದ್ದಾರೆಂಬ ಆರೋಪ ನಿನ್ನೆಯಿಂದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ವಾಸ್ತವವಾಗಿ 1996 ರಲ್ಲಿ ನಮ್ಮ ತಂದೆಯವರಾದ ಶ್ರೀ ನಂಜಪ್ಪ ಉರುಫ್ ಚಾಮರಾಜೇಗೌಡ ಅವರು ಕೇತಗಾನಹಳ್ಳಿಯಲ್ಲಿ 03 ಎಕರೆ 25 ಗುಂಟೆ ಜಮೀನನ್ನು ಕ್ರಮಬದ್ಧವಾಗಿ ಖರೀದಿಸಿರುತ್ತಾರೆ, ಅವರು ಕಾಲವಾದ ನಂತರ ಅದು ನನ್ನ ಹೆಸರಿಗೆ ವರ್ಗಾವಣೆಯಾಗಿರುತ್ತದೆ, ಎಲ್ಲವೂ ಕ್ರಮಬದ್ಧವಾಗಿ ಕಾನೂನಾತ್ಮಕವಾಗಿ ನಡೆದಿದ್ದು ಯಾವುದೇ ರೀತಿಯ ಒತ್ತುವರಿ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ನಾನು ಲೋಕಸಭಾ ಚುನಾವಣೆ ವೇಳೆ ಸಲ್ಲಿಸಿದ್ದ ಅಫಿಡವಿಟ್ ನಲ್ಲೂ ತಿಳಿಸಿರುತ್ತೇನೆ. ಇತ್ತೀಚಿಗೆ ಕೆಲವು ಮಾಧ್ಯಮಗಳಲ್ಲಿ ವಾಸ್ತವಾಂಶವನ್ನು ತಿರುಚಿ ಜನತೆಗೆ ತಪ್ಪು ಸಂದೇಶ ನೀಡುತ್ತಿರುವುದು ಹಾಗೂ ನನ್ನ ಹೆಸರಿಗೆ ಚ್ಯುತಿ ಬರುವ ರೀತಿ ಆರೋಪಗಳನ್ನು ಮಾಡುತ್ತಿರುವುದು ನನಗೆ ನೋವುಂಟು ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಳೆದ ಅನೇಕ ದಶಕಗಳಿಂದ ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದ್ದೇನೆ, ಯಾವುದೇ ರೀತಿಯ ಅಕ್ರಮಗಳಿಗೆ ಆಸ್ಪದ ನೀಡಿಲ್ಲ. ನನ್ನ ಮೇಲೆ ಮಾಡಲಾಗಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ.




