ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ಮಹಿಳಾ ಮತ್ತು ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರು ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ (ಡಿಎಪಿಆರ್) ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿ ಟಿ ರವಿ ಅವರು ಒಂದು ಬಾರಿ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ನಾಲ್ಕು ಗಂಟೆಯ ವಿಡಿಯೋ ರೆಕಾರ್ಡ್ನಲ್ಲಿ ಒಟ್ಟು ಏಳು ಬಾರಿ ಅವಾಚ್ಯ ಶಬ್ದ ಬಳಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದಬಂದಿದೆ. ಹೀಗಾಗಿ ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿ ಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಮುಂದಾಗಿದೆ. ಆದರೆ ತಾನು ಅವಾಚ್ಯ ಶಬ್ದ ಬಳಸಿಲ್ಲ ಎಂದು ಸಿಟಿ ರವಿ ಹೇಳುತ್ತಿದ್ದಾರೆ. ಜೊತೆಗೆ ವಾಯ್ಸ್ ಸ್ಯಾಂಪಲ್ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ, ನ್ಯಾಯಾಲಯದ ಮೂಲಕ ವಿಚಾರಣೆಗೆ ಮತ್ತು ವಾಯ್ಸ್ ಸ್ಯಾಂಪಲ್ ಪಡೆಯಲು ಸಿಐಡಿ ಸಿದ್ಧತೆ ನಡೆಸಿದೆ.
ಏನಿದು ಪ್ರಕರಣ?: ಬೆಳಗಾವಿ ಚಳಿಗಾಲದ ಅಧಿವೇಶನದ ಕೊನೆಯ ದಿನ ಡಿಸೆಂಬರ್ 19, 2024ರಂದು ವಿಧಾನ ಪರಿಷತ್ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು ಸಂಘರ್ಷದ ವಾತಾವರಣ ಏರ್ಪಟ್ಟಿತ್ತು. ಮಾತಿನ ಚಕಮಕಿ ನಡುವೆ ಸಿ ಟಿ ರವಿ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಂಸದೀಯ ಪದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಐಡಿ, ಆ ದಿನ ನಡೆದಿದ್ದ ಘಟನಾವಳಿ ಕುರಿತ ವಿಡಿಯೋ ನೀಡುವಂತೆ ಡಿಎಪಿಆರ್ಗೆ ಪತ್ರ ಬರೆದಿತ್ತು. ಈ ಕೋರಿಕೆ ಹಿನ್ನೆಲೆಯಲ್ಲಿ ಸಿಐಡಿಗೆ ಡಿಎಪಿಆರ್ ಇಲಾಖೆ ವಿಡಿಯೋ ಒದಗಿಸಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಫ್ರಸ್ಟ್ರೇಟ್ ಎಂಬ ಪದ ಬಳಸಿದ್ದೇನೆ ಹೊರತು ನಿಂದಿಸಿಲ್ಲ ಎಂದು ಸಿ ಟಿ ರವಿ ಅವರು ಹೇಳುತ್ತಿದ್ದಾರೆ. ಅಲ್ಲದೇ ತಾನು ನಿಂದಿಸಿದ್ದಕ್ಕೆ ಅಸಲಿ ವಿಡಿಯೋವೇ ಇಲ್ಲ ಎಂದು ಹೇಳಿದ್ದರು. ಇನ್ನೊಂದಡೆ, ರವಿ ಅವರು ನಿಂದಿಸಿ ಕುರಿತು ಯಾವುದೇ ಆಡಿಯೋ-ವಿಡಿಯೋ ಇಲ್ಲವೆಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೂಡ ಹೇಳಿದ್ದರು. ಇದೀಗ ವಿಡಿಯೋ ಸಾಕ್ಷಿ ಸಿಕ್ಕಿದಂತಾಗಿದ್ದು ಮುಂದೆ ಈ ಪ್ರಕರಣ ಯಾವ ಕಡೆ ತಿರುಗಲಿದೆಯೋ ಕಾದುನೋಡಬೇಕಿದೆ.



