ನಮೂನೆ-3ರ ಸಮಸ್ಯೆಗಳಿಗೆ 2 ತಿಂಗಳ ಒಳಗೆ ಮುಕ್ತಿ: ರಹೀಂಖಾನ್

2 years ago

#Exemption #months #Form3 #issues #RaheenKhan #Session

ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3 ರ ವಿತರಣೆಯಲ್ಲಾಗುತ್ತಿರುವ ಅಡಚಣೆಗಳನ್ನು ನಿವಾರಿಸಲು ಇನ್ನೆರೆಡು ತಿಂಗಳ ಒಳಗಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಸಚಿವ ರಹೀಂಖಾನ್ ಹೇಳಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ಶಿರಸಿ ಕ್ಷೇತ್ರದ ಶಾಸಕ ಭೀಮಣ್ಣ ನಾಯಕ್ ಪ್ರಶ್ನೆ ಕೇಳಿ, ಶಿರಸಿ ಸಿದ್ಧಾಪುರ ಕ್ಷೇತ್ರದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಫಾರಂ ನಂ-3 ನೀಡುತ್ತಿಲ್ಲ. ಇದರಿಂದ ಪಟ್ಟಣ, ಪಂಚಾಯಿತಿ, ನಗರಸಭೆ, ಪುರಸಭೆಗಳಲ್ಲಿರುವ ತಮ್ಮ ಮನೆಗಳ ನಿರ್ಮಾಣಕ್ಕೆ ಸಾಲ ಪಡೆಯಲು ಅವಕಾಶಗಳಾಗುತ್ತಿಲ್ಲ ಎಂದು ಸಮಸ್ಯೆಯನ್ನು ಅನಾವರಣಗೊಳಿಸಿದರು.

ಹಿಂದೆ ಹಳೆಯ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಯೋಜಿತ ನಕ್ಷೆಗಳಿರುವುದಿಲ್ಲ. ಫಾರಂ-ಸಿ ನೀಡಲು ಯೋಜಿತ ನಕ್ಷೆ, ನಿರಪೇಕ್ಷಣಾ ಪತ್ರ ಸೇರಿದಂತೆ ಹಲವು ಷರತ್ತುಗಳನ್ನು ವಿಸಲಾಗಿದೆ. ಅವುಗಳು ಲಭ್ಯವಿಲ್ಲದ ಕಾರಣ ಸಮಸ್ಯೆ ಹೆಚ್ಚಾಗಿದೆ ಎಂದರು.

ಭೀಮಣ್ಣ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಚಲುವರಾಯಸ್ವಾಮಿ, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಂಡು 2 ತಿಂಗಳೊಳಗಾಗಿ ಈ ಸಮಸ್ಯೆ ಬಗೆಹರಿಸುತ್ತೇವೆ ಎಂದರು.

Leave a Reply