ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಜೂನ್ ಮೂರರಂದು ನಡೆಯುತ್ತಿರುವ ಚುನಾವಣೆಗೆ ಭರ್ಜರಿ ಆಯ್ಕೆ ಬಯಸಿ ಕಾಂಗ್ರೆಸ್ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ಲಾಬಿ ಜೋರಾಗಿದೆ. ವಿಧಾನಸಭೆಯಲ್ಲಿ ಮೂರು ಪಕ್ಷಗಳ ಶಾಸಕರ ಸಂಖ್ಯಾಬಲ ಆಧರಿಸಿ ಕಾಂಗ್ರೆಸ್ ಏಳು ಸ್ಥಾನ ಗಳಿಸಿದರೆ, ಬಿಜೆಪಿ ಮೂರು ಮತ್ತು ಜೆಡಿಎಸ್ ಗೆ ಒಂದು ಸ್ಥಾನ ಲಭಿಸಲಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಕಾಂಗ್ರೆಸ್ ನಲ್ಲಿ ಏಳು ಸ್ಥಾನಗಳಿಗಾಗಿ ನೂರಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದು, ತೀವ್ರ ಪೈಪೋಟಿ ನಡೆದಿದೆ. ಮಾಜಿ ಮಂತ್ರಿಗಳು, ಮಾಜಿ ಸಂಸದರೂ ಸೇರಿ ಹಲವರು ಲಾಬಿ ನಡೆಸುತ್ತಿದ್ದರೆ, ಹಾಲಿ ಹುದ್ದೆಯಿಂದ ನಿವೃತ್ತರಾಗುತ್ತಿರುವವರೂ ಕೂಡಾ ಮತ್ತೊಂದು ಅವಧಿಗೆ ಆಯ್ಕೆ ಬಯಸಿದ್ದಾರೆ.
ಕಾಂಗ್ರೆಸ್ ನಾಯಕರಿಂದ ದೆಹಲಿಯಲ್ಲಿ ಕಸರತ್ತು: ಈ ನಡುವೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಇಲ್ಲಿ ನಡೆಯಲಿದೆ ಎಂಬ ಮಾಹಿತಿ ಆಧರಿಸಿ, ದೆಹಲಿಗೆ ನೂರಾರು ಮಂದಿ ನಾಯಕರು ಆಗಮಿಸಿದ್ದಾರೆ.
ಕರ್ನಾಟಕ ಭವನ, ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸ, ಕಚೇರಿ ಈ ಎರಡೂ ಕಡೆಗಳಲ್ಲೂ ಆಕಾಂಕ್ಷೆಗಳು ಸಾಲುಗಟ್ಟಿ ನಿಂತಿದ್ದರು. ತೀವ್ರ ಪೈಪೋಟಿಯ ನಡುವೆ ಯಾರಿಗೆ ಅವಕಾಶ ಸಿಗಲಿದೆ ಎಂಬುದು ಕುತೂಹಲ ಕೆರಳಿಸಿದೆ.
ಯಾರು ಎಂಬುದನ್ನು ನಿರ್ಧರಿಸಲಿದೆ ಹೈಕಮಾಂಡ್: ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದರು.
ಕಾಂಗ್ರೆಸ್ ಗೆಲ್ಲಬಹುದಾದ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲಾ ಕಡೆಯಿಂದ ಅವಕಾಶ ನೀಡಬೇಕು ಎನ್ನುವ ಬೇಡಿಕೆ ಇದೆ. ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರು ಇದ್ದಾರೆ. ಹೀಗಾಗಿ ಈ ಬಾರಿ ಕಷ್ಟಕರ ಪರಿಸ್ಥಿತಿ ಎದುರಾಗಿದೆ ಎಂದರು.




