ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ವಂಚನೆ ಆರೋಪ ಪ್ರಕರಣ ಇದೀಗ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ.
ನಿಗಮದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಆರೋಪ ಕುರಿತಂತೆ ವಿಚಾರಣೆಗೆ ಹಾಜರಾಗುವಂತೆ ಬಿ. ನಾಗೇಂದ್ರ ಅವರಿಗೆ ಸಿಬಿಐ ನೋಟೀಸ್ ನೀಡಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕಳೆದ ಜನವರಿ1 ರಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಗೇಂದ್ರ ಅವರ ಆಪ್ತ ವಿಶ್ವನಾಥ ಅವರ ಬಳ್ಳಾರಿಯಲ್ಲಿರುವ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಕೆಲ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
ಇದರ ಬೆನ್ನಲ್ಲೇ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಿ.ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಿಬಿಐ ನೋಟೀಸ್ ಕೊಟ್ಟಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆ ನಡೆಸಿ ಬಂಧನಕ್ಕೊಳಪಡಿಸಿತ್ತು. ಈ ಪ್ರಕರಣದಲ್ಲಿ ನಾಗೇಂದ್ರ ಕೊನೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.
ಈ ಆರೋಪ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಈ ಹಿಂದೆ ಎಸ್‌ಐಟಿ ತನಿಖೆ ನಡೆಸಿತ್ತು.
ಆದರೆ ಬಿಜೆಪಿಯ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ, ಮಾಜಿ ಮಂತ್ರಿಗಳಾದ ಅರವಿಂದ ಲಿಂಬಾವಳಿ, ಕುಮಾರ್ ಬಂಗಾರಪ್ಪ ಹಾಗೂ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿದ್ದರು.
ಅಂತಿಮವಾಗಿ ಎರಡೂ ಕಡೆ ವಾದ ಮತ್ತು ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎನ್.ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ಆದೇಶ ನೀಡಿದ್ದರು. ಜೊತೆಗೆ ಪ್ರಕರಣ ತನಿಖೆ ನಡೆಸಿದ್ದ ಎಸ್‌ಐಟಿ ಸಂಗ್ರಹಿಸಿದ್ದ ಎಲ್ಲಾ ದಾಖಲೆಗಳನ್ನೂ ಸಿಬಿಐಗೆ ವಹಿಸಬೇಕೆಂದು ಸೂಚಿಸಿತ್ತು. ಅದರಂತೆ ಇದೀಗ ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ.




