ಬೆಂಗಳೂರು: ಹಾಸನ ಸೇರಿದಂತೆ ರಾಜ್ಯದ ಹಲವೆಡೆ ಇತ್ತೀಚೆಗೆ ಸಂಭವಿಸಿರುವ ಹೃದಯಾಘಾತ ಪ್ರಕರಣಗಳ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚಿಸಲಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಜಯದೇವ ಹೃದ್ರೋಗ ವಿಜ್ಞಾನಗಳ ಮತ್ತು ಸಂಶೋಧನ ಸಂಸ್ಥೆ ಪ್ರಭಾರ ನಿರ್ದೇಶಕ ಡಾ. ಕೆ.ಎಸ್. ರವೀಂದ್ರನಾಥ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು,10 ದಿನಗಳಲ್ಲಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಸೂಚಿಸಿದ್ದಾರೆ.
ಕೋವಿಡ್ ಅನಂತರದ ವೈದ್ಯಕೀಯ ದುಷ್ಪರಿಣಾಮಗಳ ಕುರಿತು ಅಧ್ಯಯನ ನಡೆಸುತ್ತಿರುವ ಇದೇ ಸಮಿತಿಗೆ ಹಾಸನ ಸೇರಿ ರಾಜ್ಯದಲ್ಲಿ ಈಚೆಗೆ ಸಂಭವಿಸಿದ ಹಲವು ಹೃದಯಾಘಾತ ಪ್ರಕರಣಗಳ ಅಧ್ಯಯನದ ಹೊಣೆಗಾರಿಕೆಯನ್ನೂ ವಹಿಸಲಾಗಿದೆ.
ಯುವಪೀಳಿಗೆಯಲ್ಲೇ ಹೆಚ್ಚು ಹೃದಯಾಘಾತ ಪ್ರಕರಣಗಳು ಸಂಭವಿಸಿದೆ. ಆದರೆ ಅದಕ್ಕೂ ಹಲವು ಕಾರಣ ಇರಬಹುದು. ಯಾವುದೋ ಕಾರಣದಿಂದ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿಕೊಂಡು ಬಂದಿರಬಹುದು. ವಂಶವಾಹಿ ಕಾರಣದಿಂದಲೂ ಆಗಿರಬಹುದು. ಹೃದಯದ ಸ್ನಾಯು ಅಥವಾ ಮಾಂಸಖಂಡದ ಮೇಲೆ ಪರಿಣಾಮ ಬೀರಿರುವ ಸಾಧ್ಯತೆಗಳೂ ಇರಬಹುದು.ಈ ಹಿನ್ನೆಲೆಯಲ್ಲಿ ಪ್ರತೀ ಪ್ರಕರಣದ ವೈದ್ಯಕೀಯ ದಾಖಲಾತಿಗಳನ್ನು ತರಿಸಿಕೊಂಡು ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಿದೆ.



