ಬೆಂಗಳೂರು: ರಾಜಧಾನಿ ಮಹಾನಗರ ಬೆಂಗಳೂರಿನ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಒಂದಾಗಿರುವ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಬಸ್ ನಿಲ್ದಾಣದಲ್ಲಿನ ಶೌಚಾಲಯದಲ್ಲಿ ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದೆ. ಬ್ಯಾಗ್ ತುಂಬಾ ಜಿಲೆಟಿನ್ ಕಡ್ಡಿಗಳು ಸೇರಿದಂತೆ ಹಲವು ಸ್ಫೋಟಕಗಳು ಪತ್ತೆಯಾಗಿವೆ.
ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಸ್ ನಿಲ್ದಾಣಕ್ಕೆ ಜಿಲೆಟಿನ್ ಕಡ್ಡಿ ತಂದಿಟ್ಟಿದ್ದು ಯಾರು? ಯಾವ ಉದ್ದೇಶಕ್ಕಾಗಿ ಇದನ್ನು ತರಲಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.




