ಬಳ್ಳಾರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳ (ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಾ.15 ರ ವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಭಾನುಮತಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕೋರ್ಸ್ ಗಳ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾಗಿರುವ ಕಾರಣ ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ತಡವಾಗಿ ಬಂದ ಕಾರಣ ನಿಗದಿಪಡಿಸಿದ ಅವಧಿಯೊಳಗೆ ಅರ್ಜಿಗಳು ಸಲ್ಲಿಕೆಯಾಗದ ಕಾರಣ ಅವಧಿ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಆನ್‌ಲೈನ್ ವೆಬ್‌ಸೈಟ್ ವಿಳಾಸ https://ssp.postmatric.karnataka.gov.in/ ಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.




