ಶಿವಮೊಗ್ಗ: ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್ ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್ ಸ್ಕೀಂ) ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಜಾಲತಾಣ HTTPS://ONLINE.KSB.GOV.IN ರಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:03/01/2025 ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕ ಡಾ. ಸಿ.ಎ. ಹಿರೇಮಠ ತಿಳಿಸಿದ್ದಾರೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂ. ಸಂ.: 08182-220925 ನ್ನು ಸಂಪರ್ಕಿಸಬಹುದು.




