ಶಿವಮೊಗ್ಗ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2024-25ನೇ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಸೆ.21 ರಿಂದ ಅ.19ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ.: 08182-295514 ಅಥವಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕರಿಗಳ ಕಚೇರಿಗಳನ್ನು ಸಂಪರ್ಕಿಸುವುದು.




