ಶಿವಮೊಗ್ಗ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮನಾಂತರ ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in, bcwdhelpline@gmail.com,, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದು.




