ಶಿವಮೊಗ್ಗ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮನಾಂತರ ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ.
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
- ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
- ಮೈಸೂರು ದಸರಾ: ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in, bcwdhelpline@gmail.com, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದು.



