ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಸೆ.04ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಚುನಾಯಿತ ನಿರಂಕುಶಾಧಿಕಾರದ ಅಭೇದ್ಯ ಗೋಡೆಯಲ್ಲಿ ಒಂದು ಬಿರುಕು: ದಾರಿ ತೋರಿಸುತ್ತಿರುವ ಯುವಜನತೆ
- ಒಂದು ದಿನಕ್ಕೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಆಗಲು ಅವಕಾಶ ಮಾಡಿಕೊಟ್ಟ ಪ್ರಿಯಾಂಕ್ ಖರ್ಗೆ
- ಸಾಂಸ್ಕೃತಿಕ ಸಂಘಟನೆಗಳ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
- ಬೀದಿಬದಿ ವ್ಯಾಪಾರಸ್ಥರನ್ನು ತೆರವುಮಾಡುತ್ತಿದ್ದ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
- ಪ್ರವಾದಿ ಮಹಮ್ಮದರ ಜಯಂತಿಗೆ ಟಿಪ್ಪು ಸುಲ್ತಾನರ ಕಟೌಟ್ ಹಾಕುವುದೇ? ನಾನ್ಸೆನ್ಸ್!
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2026-27ನೇ ಸಾಲಿನ ಸಾಮಾನ್ಯ, ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಉಪಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿತ್ತು.
ಸದರಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆಯ ಕಾಲಾವಧಿಯನ್ನು 15 ದಿನಗಳು ವಿಸ್ತರಿಸಿದ್ದು, ಸೆಪ್ಟೆಂಬರ್ 04, 2026 ರೊಳಗಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ 080-24410574, 080-22213530, 9986837037, 080-22241325 ನ್ನು ಹಾಗೂ ಆಯಾ ಜಿಲ್ಲೆಯ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು.




