ಬಳ್ಳಾರಿ: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಈಗಾಗಲೇ ಅರ್ಜಿ ಸಲ್ಲಿಸಲು ಸೇವಾಸಿಂಧು ಪೋರ್ಟಲ್ನಲ್ಲಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 06 ರವರೆಗೆ ವಿಸ್ತರಿಸಲಾಗಿದೆ ಎಂದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ 2024-25ನೇ ಸಾಲಿಗೆ ಬಿ.ಎಡ್ ಕೋರ್ಸ್ ಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ಅಭ್ಯರ್ಥಿಗಳು ಸೇವಾಸಿಂದು ಪೋರ್ಟಲ್ https;//sevasindu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಜಿಲ್ಲಾ ಮತ್ತು ತಾಲ್ಲೂಕುವಾರು ವಿವರ: ಬಳ್ಳಾರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಆಜಾದ್ ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ-ಮೊ.8310321101, ಸಂಡೂರು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಗೆ ಇಲಾಖೆ ಕಚೇರಿ ಆವರಣ ಸಂಡೂರು (ಮೊ.9036925966, 8660575061), ಸಿರುಗುಪ್ಪ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಕಚೇರಿ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ (ಮೊ.9148889975).
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ 8277799990 (24*7) ಸಂಪರ್ಕಿಸಬಹುದು.




