ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ 2026ರ ಮೇ 08ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯೋಗ ತಿಳಿಸಿದೆ.
- ಮೇ 25ಕ್ಕೆ ಕರ್ನಾಟಕ ಸಂಘಟಕರ ಸಮಾವೇಶ
- ಬಿಜೆಪಿಗೆ ಅಭೂತಪೂರ್ವ ಗೆಲುವು, ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಜನರ ಮೆಚ್ಚುಗೆ: ಡಾ.ಕೆ.ಸುಧಾಕರ್
- ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ
- ‘ಹಕ್ಕಿಹಾಡು’ ನೂತನ ರಂಗಪ್ರಯೋಗ, ರಂಗಾಸಕ್ತ ಸಹೃದಯರ ಮನಸೂರೆಗೊಳ್ಳುವಲ್ಲಿ ಯಶಸ್ವಿ
- ಕಪಿಲೇಶ್ವರ ಹೊಂಡದಲ್ಲಿ ದುರಂತ: ಈಜಲು ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು
ಸಾರ್ವಜನಿಕರು ಆನ್ ಲೈನ್ ಮೂಲಕ ತಮ್ಮ ಮನವಿಗಳನ್ನು https://rdpr.karnataka.gov.in/rdc/public/ ಈ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು-560001 ಇಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
31 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತಂತೆ, ಸ್ವೀಕರಿಸಿದ ಆಕ್ಷೇಪಣೆ/ಅಹವಾಲುಗಳ ಬಗ್ಗೆ ಅದಾಲತ್ ಈ ತಿಂಗಳ 12ರಿಂದ 15ರವರೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗೇಟ್-ನಂ-2, 2ನೇ ಮಹಡಿ, ಬಹುಮಹಡಿಗಳ ಕಟ್ಟಡ, ಕೊಠಡಿ ಸಂಖ್ಯೆ-229 ಬೆಂಗಳೂರು-560001 ಇಲ್ಲಿ ನಡೆಯಲಿದೆ. ಅದಾಲತ್‌ನಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಆಧಾರ್ ಅಥವಾ ಗುರುತಿನ ಚೀಟಿ ಅಥವಾ ಸರ್ಕಾರದಿಂದ ನೀಡಿರುವ ಭಾವಚಿತ್ರವುಳ್ಳ ಯಾವುದೇ ಗುರುತಿನ ಚೀಟಿಯ ಪ್ರತಿಯನ್ನು ತಮ್ಮೊಂದಿಗೆ ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದೆ.


