ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಮಾಧ್ಯಮಗಳಿಗೆ ಸುದ್ದಿ ಬಿಡುಗಡೆ ಮಾಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು.
ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ದಿನಾಂಕ: 01.09.2025 ರ ಸಂಜೆ 5.00 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.
ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ,ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದು.
ಹೆಚ್ಚಿನ ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು.




