ಚಿತ್ರದುರ್ಗ: ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 110 ರ ಅನ್ವಯ “ಎ” ರಿಜಿಸ್ಟರ್‍ನಲ್ಲಿ ಅಂದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯಲಾದ ಬಡಾವಣೆಯಲ್ಲಿನ ಸ್ವತ್ತುಗಳಿಗೆ ಇ-ಖಾತಾ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಆದರೆ, ಭೂ ಪರಿವರ್ತನೆ ಆಗದೇ ಉಪ-ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿದ್ದು, ಆದರೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ. ಈ ಅವಕಾಶವನ್ನು ಒಮ್ಮೆ ಮಾತ್ರ ನೀಡಲಾಗುತ್ತಿದೆ ಎಂದಿದ್ದಾರೆ.
“ಬಿ” ರಿಜಿಸ್ಟರ್‍ನಲ್ಲಿ ದಾಖಲಿಸುವ ಆಸ್ತಿಗಳಿಗೆ 2024-25ನೇ ಸಾಲಿಗೆ ಮೊದಲ ಬಾರಿಗೆ ಸ್ವತ್ತು ತೆರಿಗೆಯ 2 ರಷ್ಟು ತೆರಿಗೆಯನ್ನು ವಿಧಿಸಲಾಗುತ್ತದೆ. ತದನಂತರದ ವರ್ಷಗಳಲ್ಲಿ ಸ್ವತ್ತು ತೆರಿಗೆಯನ್ನು ಮಾತ್ರ ವಿಧಿಸಲಾಗುತ್ತದೆ. “ಬಿ” ರಿಜಿಸ್ಟರ್‍ನಲ್ಲಿ ಸರ್ಕಾರಿ ಜಾಗದಲ್ಲಿರುವ ಸ್ವತ್ತುಗಳು/ ಸರ್ಕಾರದ ನಿಗಮ ಮಂಡಳಿಗಳ ಜಾಗಗಳು/ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಜಾಗಗಳು ಹೊರತುಪಡಿಸಿ ದಿನಾಂಕ:10.09.2024 ರ ಪೂರ್ವಕ್ಕೆ ನೋಂದಾಯಿತವಾದ ಭೂ ಪರಿವರ್ತನೆ ಆಗದೇ ಉಪ ವಿಭಜನೆ ಮಾಡಿ ನಿವೇಶನಗಳಾಗಿ ಮಾರಾಟ ಮಾಡಿರುವ ನಿವೇಶನ/ಕಟ್ಟಡಗಳು ಮತ್ತು ಭೂ ಪರಿವರ್ತನೆಯಾಗಿ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾಗದ ಬಡಾವಣೆಗಳಲ್ಲಿನ ನಿವೇಶನ/ಕಟ್ಟಡಗಳಿಗೆ “ಬಿ” ರಿಜಿಸ್ಟರ್‍ನಲ್ಲಿ ನಮೂದಿಸಿಕೊಂಡು ಇ-ಖಾತಾ ನೀಡಲಾಗುತ್ತದೆ ಎಂದಿದ್ದಾರೆ.
ಆದುದರಿಂದ ಇದುವರೆಗೆ ಇ-ಖಾತಾ ಪಡೆಯದ ಅಂತಹ ಎಲ್ಲಾ ಸ್ವತ್ತುಗಳ ಮಾಲೀಕರು ಕೂಡಲೇ ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ಕಛೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿ ಸಂಪರ್ಕಿಸಿ “ಬಿ” ರಿಜಿಸ್ಟರ್‍ನಲ್ಲಿ ಇ-ಖಾತಾ ಪಡೆಯಲು ಅರ್ಜಿ ಸಲ್ಲಿಸಿ ಸರ್ಕಾರ ನೀಡಿರುವ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದಿದ್ದಾರೆ.
“ಬಿ” ಖಾತಾ ಪಡೆಯಲು ಈ ಹಿಂದೆ ನೀಡಿದ್ದ ಅಂತಿಮ ದಿನಾಂಕ:10.05.2025ನ್ನು ವಿಸ್ತರಿಸಿದ್ದು, ಸಾರ್ವಜನಿಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ಶೀಘ್ರವಾಗಿ ಇ-ಖಾತಾ ಪಡೆದುಕೊಳ್ಳಬೇಕು ಎಂದಿದ್ದಾರೆ.




