ಬೆಂಗಳೂರು: ನಾಳೆಯಿಂದ (ಮಾರ್ಚ್ 18) ಏಪ್ರಿಲ್ 2ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ನಾಡಿನ ಸುಮಾರು 8.66 ಲಕ್ಷ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾರ್ದಿಕ ಶುಭಾಶಯಗಳು ಎಂದರು.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಲಾಪದಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಭಯ ಸದನಗಳ ಪರವಾಗಿ ಶುಭಕೋರಿದರು.
ಯಾವುದೇ ಆತಂಕ, ಭಯವಿಲ್ಲದೆ, ಮುಕ್ತ ಮನಸ್ಸಿನಿಂದ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ. ನಿಮ್ಮ ಮೇಲಿನ ಒತ್ತಡವನ್ನು ಸಂಪೂರ್ಣವಾಗಿ ನಿವಾರಿಸಲು ಹಾಗೂ ನಿಮ್ಮ ಉಜ್ವಲ ಭವಿಷ್ಯದ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಈ ವರ್ಷದಿಂದ ಮೂರು ಪರೀಕ್ಷೆಗಳ ಅವಕಾಶವನ್ನು (Exam 1, 2, & 3) ಕಲ್ಪಿಸಿದೆ. ಜೊತೆಗೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮರುಪರೀಕ್ಷೆಯ ಶುಲ್ಕವನ್ನು ಕೂಡ ರದ್ದುಗೊಳಿಸಲಾಗಿದೆ. ಹಾಗಾಗಿ ಯಾವುದೇ ಅಂಜಿಕೆ ಬೇಡ ಎಂದು ಧೈರ್ಯ ತುಂಬಿದರು.
ಪೋಷಕರು ಕೂಡ ಮಕ್ಕಳ ಮೇಲೆ ಅನಗತ್ಯ ಒತ್ತಡ ಹೇರದೆ, ಅವರಿಗೆ ಈ ಸಮಯದಲ್ಲಿ ನೈತಿಕ ಬೆಂಬಲವಾಗಿ ನಿಲ್ಲಬೇಕಾಗಿ ವಿನಂತಿಸುತ್ತೇನೆ. ಯಶಸ್ವಿಯಾಗಿ ಪರೀಕ್ಷೆ ನಡೆಸಲು ಸಹಕರಿಸುತ್ತಿರುವ ಎಲ್ಲಾ ಶಿಕ್ಷಕರಿಗೂ, ಗೃಹ ಇಲಾಖೆಗೂ ಹಾಗೂ ಪೋಷಕರಿಗೂ ನನ್ನ ವಿಶೇಷ ಧನ್ಯವಾದಗಳು. ಎಲ್ಲರಿಗೂ ಒಳಿತಾಗಲಿ. ಆಲ್ ದಿ ಬೆಸ್ಟ್ ಎಂದರು.




