ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ

3 years ago

ಬೆಂಗಳೂರು: ಕೋಲ್ಕತ್ತಾದಿಂದ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ವಿಮಾನದ ಸೀಟೊಂದರಲ್ಲಿ ಸಿಕ್ಕ ಟಿಶ್ಯೂ ಪೇಪರ್ನಲ್ಲಿ ಬಾಂಬ್ ಬೆದರಿಕೆ ಸಂದೇಶ ಪತ್ತೆಯಾಗಿದ್ದು ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು. ತಕ್ಷಣವೇ ಕೂಲಂಕಷವಾಗಿ ತಪಾಸಣೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂದು ತಿಳಿದುಬಂದಿದೆ.

ಬೆಂಗಳೂರು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಿಂದ 6ಇ 379 ಇಂಡಿಗೋ ಟೆಕ್ ಆಫ್ ಆಗಿ ಬೆಳಗ್ಗೆ 8:10ಕ್ಕೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲುಗಡೆಯಾಗಿದೆ.

ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ ಇರುವ ಮಾಹಿತಿ ಇಂಡಿಗೋ ಸಿಬ್ಬಂದಿಗೆ ತಿಳಿದುಬಂದಿದೆ. ತಕ್ಷಣವೇ ಭದ್ರತಾ ಸಿಬ್ಬಂದಿ ಕರೆದು ತಪಾಸಣೆ ನಡೆಸಲಾಯಿತು. 6ಡಿ ಸೀಟ್ ಬಳಿ ದೊರೆತ ಟಿಶ್ಯೂ ಪೇಪರ್ ನಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ನೀಲಿ ಅಕ್ಷರಗಳಲ್ಲಿ ಬರೆಯಲಾಗಿದ್ದ ಬಾಂಬ್ ಬೆದರಿಕೆ ಸಂದೇಶ ಇದಾಗಿದೆ.

ಬಾಂಬ್ ನಿಷ್ಕ್ರಿಯ ದಳದವರು ವಿಮಾನವನ್ನು ಸಂಪೂರ್ಣ ತಪಾಸಣೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಸಂದೇಶ ಎಂಬುದು ತಿಳಿದುಬಂದಿದೆ. ಏರ್ ಪೋರ್ಟ್ ಸಿಬ್ಬಂದಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Leave a Reply