ಬೆಂಗಳೂರು: ಮಹಾನಗರ ಬೆಂಗಳೂರಿನಲ್ಲಿರುವ ಎಂ ಎಸ್ ಧೋನಿ ಪಬ್ಲಿಕ್ ಶಾಲೆ, ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸೇರಿದಂತೆ ಪ್ರತಿಷ್ಠಿತ ಶಾಲೆಗಳು ಸೇರಿ ನಲವತ್ತಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಇ-ಮೇಲ್ ಮೂಲಕ ಬಂದಿರುವ ಈ ಸಂದೇಶ ಖಾಸಗಿ ಶಾಲೆಗಳ ಆಡಳಿತ ಮಂಡಳಿಯನ್ನು ಆತಂಕದಲ್ಲಿ ಬೀಳುವಂತೆ ಮಾಡಿತು. ಇದರಿಂದ ಬೆಚ್ಚಿಬಿದ್ದ ಕೆಲವು ಶಾಲೆಗಳ ಆಡಳಿತ ಮಂಡಳಿ ತರಗತಿಗಳಿಂದ ಮಕ್ಕಳನ್ನು ಮನೆಗೆ ಕಳುಹಿಸಿದರೆ ಮತ್ತೆ ಕೆಲವರು ಪೊಲೀಸರಿಗೆ ಮಾಹಿತಿ ನೀಡಿ ಎಂದಿನಂತೆ ಶಾಲೆಗಳನ್ನು ನಡೆಸಿದರು.
ನಗರದ ಭಾರತಿನಗರ, ಕಬ್ಬನ್‌ಪಾರ್ಕ್ ರಾಜರಾಜೇಶ್ವರಿ ನಗರ ಕೆಂಗೇರಿ ಸೇರಿದಂತೆ ಇನ್ನಿತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿನ 20 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲೆಗಳಲ್ಲಿ ಪೊಲೀಸರು ಬಿಗಿಭದ್ರತೆಯನ್ನು ಕೈಗೊಂಡಿದ್ದಾರೆ.
ಬೆಳಿಗ್ಗೆ 9 ಗಂಟೆಗೆ ಅನಾಮಧೇಯ ಸ್ಥಳದಿಂದ ನಗರದ ಹಲವಾರು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಶಾಲೆಗಳನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಶಾಲೆಯೊಳಗೆ ಬಾಂಬ್‌ಗಳು ಎಂಬ ಶೀರ್ಷಿಕೆಯ ಇ-ಮೇಲ್‌ಗಳನ್ನು roadkill333@atomicmail.io ಈ ಐಡಿಯಿಂದ ಸಂದೇಶ ಕಳುಹಿಸಲಾಗಿದೆ. ತರಗತಿ ಕೊಠಡಿಗಳಲ್ಲಿ ಟ್ರೆನಿಟ್ರೊಟೊಲೈನ್ಸ್ ಎಂಬ ಸುಧಾರಿತ ಸ್ಫೋಟಕ ವಸ್ತುವನ್ನು ಇಡಲಾಗಿದ್ದು, ಯಾವುದೇ ಕ್ಷಣ ಅದು ಸ್ಫೋಟಗೊಳ್ಳಬಹುದೆಂದು ಬೆದರಿಕೆ ಒಡ್ಡಲಾಗಿತ್ತು.
ಇ-ಮೇಲ್ ಬೆದರಿಕೆಯಲ್ಲಿ ಸ್ಫೋಟಕಗಳನ್ನು ಕಪ್ಪುಬಣ್ಣದ ಪ್ಲಾಸ್ಟಿಕ್ ಚೀಲಗಳಲ್ಲಿ ಇಡಲಾಗಿದ್ದು, ಯಾವುದೇ ವೇಳೆ ಸ್ಫೋಟಗೊಳ್ಳಲಿದೆ. ನಿಮಲ್ಲಿ ಪ್ರತಿಯೊಬ್ಬರನ್ನೂ ನಾನು ಈ ಪ್ರಪಂಚದಿಂದ ಅಳಿಸಿ ಹಾಕುತ್ತೇನೆ. ಒಂದೇ ಒಂದು ಆತ್ಮವೂ ಬದುಕುಳಿಯುವುದಿಲ್ಲ. ಸ್ಫೋಟಗೊಂಡ ಸುದ್ದಿಯನ್ನು ಕೇಳಿ ಸಂತೋಷದಿಂದ ನಗುತ್ತೇನೆ. ಪೋಷಕರು ಶಾಲೆಗಳಲ್ಲಿ ಕಾಣಿಸಿಕೊಳ್ಳುವುದನ್ನು ಮತ್ತು ಅವರ ಮಕ್ಕಳ ದೇಹಗಳು ಛಿದ್ರಗೊಂಡು ಸ್ವಾಗತಿಸುವುದನ್ನು ಮಾತ್ರ ನೋಡುತ್ತೇನೆ. ನೀವೆಲ್ಲರೂ ಇದರಿಂದ ದುಃಖಿತರಾಗಬೇಕು. ನನಗೆ ನನ್ನ ಜೀವನ ನಿಜಕ್ಕೂ ಇಷ್ಟವಿಲ್ಲ. ಸುಧಾರಿತ ಸ್ಫೋಟಕ ಸ್ಫೋಟಗೊಂಡಿದೆ ಎಂಬ ಸುದ್ದಿ ಬಂದ ನಂತರ ನಾನು ಆತಹತ್ಯೆ ಮಾಡಿಕೊಳ್ಳುತ್ತೇನೆ. ನಾನು ನನ್ನ ಗಂಟಲು ಮತ್ತು ಮಣಿಕಟ್ಟುಗಳನ್ನು ಕತ್ತರಿಸಿಕೊಳ್ಳುತ್ತೇನೆ. ನನಗೆ ನಿಜವಾಗಿಯೂ ಬದುಕಲು ಇಷ್ಟವಿಲ್ಲ. ನನ್ನ ಬಗ್ಗೆ ಮನೋವೈದ್ಯರು, ಮನಃಶಾಸ್ತ್ರಜ್ಞರು, ವೈದ್ಯರು ಯಾರೂ ಕೂಡ ಕಾಳಜಿ ವಹಿಸಿಲ್ಲ. ನೀವು ಅಸಹಾಯಕ ಮತ್ತು ಸುಳಿವು ಇಲ್ಲದ ಮನುಷ್ಯನಿಗೆ ಔಷಧಿ ನೀಡುವುದರ ಬಗ್ಗೆ ಮಾತ್ರ ಕಾಳಜಿ ವಹಿಸುತ್ತೀರಿ. ಹೀಗೆಂದು ಇ-ಮೇಲ್‌ನಲ್ಲಿ ಅನಾಮಧೇಯ ವ್ಯಕ್ತಿ ಬೆದರಿಕೆ ಹಾಕಿದ್ದ.
ಯಾವಾಗ ಖಾಸಗಿ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಇ-ಮೇಲ್ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತೋ ತಕ್ಷಣವೇ ಎಚ್ಚೆತ್ತುಕೊಂಡ ಶಾಲಾ ಆಡಳಿತ ಮಂಡಳಿಯವರು ಹತ್ತಿರದಲ್ಲಿರುವ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿದರು.
ದೂರವಾಣಿ ಕರೆ ಬರುತ್ತಿದ್ದಂತೆ ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ, ಮೆಟಲ್ ಡಿಟೆಕ್ಟರ್ ಸೇರಿದಂತೆ ಸುಧಾರಿತ ಸಾಧನಗಳಿಂದ ಶಾಲೆಯ ಎಲ್ಲಾ ಕೊಠಡಿಗಳನ್ನೂ ತಪಾಸಣೆ ನಡೆಸಲಾಯಿತು. ಕೊಠಡಿಯಲ್ಲಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಆಚೆ ಕಳುಹಿಸಿ ಶೋಧ ನಡೆಸಿದರು.
ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂಬ ಸುದ್ದಿ ಕೇಳಿದ ಪೋಷಕರು ತಕ್ಷಣವೇ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶಾಲೆಗೆ ದೌಡಾಯಿಸಿದರು. ಕೆಲವು ಪೋಷಕರು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋದರು.
ಮೇಲ್ನೋಟಕ್ಕೆ ಇದೊಂದು ಹುಸಿ ಬಾಂಬ್ ಕರೆ ಎಂದು ಶಂಕಿಸಲಾಗಿದೆ. ಆದರೂ ಮಕ್ಕಳ ಹಿತದೃಷ್ಟಿಯಿಂದ ಯಾವ ಸ್ಥಳದಿಂದ ಇ-ಮೇಲ್ ಬಂದಿದೆ ಎಂಬುದನ್ನು ಪತ್ತೆ ಮಾಡಲು ನಗರ ಪೊಲೀಸರು ಮುಂದಾಗಿದ್ದಾರೆ. ಇದೀಗ ಶಾಲೆಗಳಲ್ಲಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದ್ದು, ಅನಗತ್ಯವಾಗಿ ಪೋಷಕರು, ಮಕ್ಕಳು ಆತಂಕಕ್ಕೆ ಒಳಗಾಗಬಾರದು ಎಂದು ಶಾಲಾ ಆಡಳಿತ ಮಂಡಳಿಯವರು ಮನವಿ ಮಾಡಿದ್ದಾರೆ.



