ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದಿದ್ದ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಅಪೆಕ್ಸ್ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡ ಅವರನ್ನು ಇ.ಡಿ ಅಧಿಕಾರಿಗಳು ಅಲ್ಲಿಯೇ ವಶಕ್ಕೆ ಪಡೆದು ಕೆಲಕಾಲ ವಿಚಾರಣೆ ನಡೆಸಿದರು. ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ ಪರಿಶೀಲಿಸಿದರು.
2014ರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ ಬೆಳಕಿಗೆ ಬಂದಾಗ ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅಧ್ಯಕ್ಷರಾಗಿದ್ದರು. ಆಗ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದು ಹೊರ ಬಂದಿದ್ದರು.
ಬ್ಯಾಂಕಿನ ಅಂದಿನ ವ್ಯವಸ್ಥಾಪಕಿ ಶೋಭಾ, ಆಗ ಕೆಲಸ ಮಾಡುತ್ತಿದ್ದ ಬ್ಯಾಂಕ್ ಸಿಬ್ಬಂದಿ, ಕಾರು ಚಾಲಕರು ಹಾಗೂ ಆರ್.ಎಂ.ಮಂಜುನಾಥಗೌಡ ಅವರ ಸಂಬಂಧಿಗಳಿಗೆ ಸೇರಿದ ಮನೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು.




