ಬೆಂಗಳೂರು: ರಾಜ್ಯದಲ್ಲೆಡೆ ಉತ್ತಮ ಮಳೆಯಾಗಿದ್ದು ಕೃಷಿ ಚಟುವಟಿಕೆಗಳು ಚುರುಕಿನಿಂದ ಆರಂಭಗೊಂಡಿವೆ. ಈ ನಡುವೆ ಕೆಲವು ಕಡೆ ರಸಗೊಬ್ಬರ ಅಭಾವವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಖುಷಿ ಸಚಿವ ಚಲುವರಾಯಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದರು.
ರೈತರಿಗೆ ಯಾವುದೇ ರೀತಿ ತೊಂದರೆಗಳಾಗದಂತೆ ನಿಗಾ ವಹಿಸಲು ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರ್ಷ ಮುಂಗಾರು ಬೇಗ ಆರಂಭವಾದ ಕಾರಣ ಇಂತಹ ಗೊಂದಲ ಉಂಟಾಗಿದೆ ಎಂದರು.
ಈ ಬಾರಿ ಸುಮಾರು 2 ಲಕ್ಷ ಹೆಕ್ಟೇರ್ ಮುಸುಕಿನ ಜೋಳ ಪ್ರದೇಶ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಕೆಲವು ರೈತರು ಆತಂಕದಿಂದ ಆಗಸ್ಟ್ – ಸೆಪ್ಟೆಂಬರ್ ಗೆ ಬೇಕಾದ ಗೊಬ್ಬರವನ್ನ ಈಗಲೇ ಖರೀದಿಸಲು ಮುಂದಾಗಿದ್ದು ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದರು.
ರಾಜ್ಯದಲ್ಲಿ ನಮ್ಮ ಗುರಿಗಿಂತ ಹೆಚ್ಚಿನ ದಾಸ್ತಾನು ಲಭ್ಯವಿದೆ, ಜುಲೈ ತಿಂಗಳ ಬೇಡಿಕೆಯಂತೆ ವಿತರಣೆಯ ನಂತರವೂ ದಾಸ್ತಾನು ಉಳಿಕೆ ಇದೆ. ಒಂದು ವೇಳೆ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಯೂರಿಯಾ ಸೇರಿದಂತೆ ರಸಗೊಬ್ಬರದ ಕೊರತೆ ಕಂಡುಬಂದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾಗಿರುವ ಜಿಲ್ಲೆಗಳಿಂದ ಮರುವಿಂಗಡಣೆ ಮಾಡಿ, ಸರಬರಾಜು ಮಾಡಲಾಗುವುದು, ಕೃಷಿಕರು ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದರು.
ರಾಜ್ಯದಲ್ಲಿ 3,46,499 ಹಳೆ ಯೂರಿಯಾ ದಾಸ್ತಾನು ಉಳಿಕೆ ಇದ್ದು, ಕೇಂದ್ರದಿಂದ ಸರಬರಾಜಾದ ಯೂರಿಯಾ ಸೇರಿದಂತೆ 8,73,315 ಮೆಟ್ರಿಕ್ ಟನ್ ಒಟ್ಟು ಲಭ್ಯತೆ ಇತ್ತು, ಇದರಲ್ಲಿ 7,08,859 ಮೆಟ್ರಿಕ್ ಟನ್ ಯೂರಿಯಾವನ್ನು ವಿವಿಧ ಜಿಲ್ಲೆಗಳಿಗೆ ವಿತರಿಸಿದ್ದು, ರೈತರಿಗೂ ಮಾರಾಟ ಮಾಡಲಾಗಿದೆ ಎಂದರು.
ಇನ್ನು 1,64,56 ಮೆಟ್ರಕ್ ಟನ್ ಯೂರಿಯ ದಾಸ್ತಾನು ಉಳಿಕೆಯಿದೆ. ಅಲ್ಲದೆ ಕೇಂದ್ರದಿಂದ ಹಂತ ಹಂತವಾಗಿ ಪೂರೈಕೆಯಾಗುವ ರಸಗೊಬ್ಬರವನ್ನು ಆಗಿಂದಾಗಲೇ ಹಂಚಿಕೆ ಮಾಡಿ ವರ್ಗಾವಣೆ ಮಾಡಲಾಗುವುದು. ರಾಜ್ಯ ಸರ್ಕಾರ ನಿರಂತರವಾಗಿ ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಹ ಯೂರಿಯ ಶೀಘ್ರ ಪೂರೈಕೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಯಾವುದೇ ಸಮಸ್ಯೆಗಳಿಲ್ಲದಂತೆ ರಸಗೊಬ್ಬರ ಪೂರೈಕೆ ನಿವಾರಿಸಲು ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಧಿಕ ಪ್ರಮಾಣದಲ್ಲಿ ನ್ಯಾನೋ ಯೂರಿಯಾ ಕೂಡ ಲಭ್ಯವಿದ್ದು ಇದು ಸಹ ಹೆಚ್ಚು ಪರಿಣಾಮಕಾರಿ ಮತ್ತು ಲಾಭದಾಯಕ ಎಂಬುದು ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯಗಳು, ರೈತರು ನಡೆಸಿದ ಪ್ರಯೋಗಗಳ ಸಾಭೀತಾಗಿದ್ದು. ಉಳಿತಾಯ ಕೂಡ ಆಗಲಿದೆ. ಆದ್ದರಿಂದ ಕೃಷಿಕರು ಈ ಬಗ್ಗೆಯೂ ಗಮನಹರಿಸಬೇಕು ಎಂದರು.
ಅತಿಯಾದ ರಸಗೊಬ್ಬರ ಬಳಕೆ ಭೂಮಿಯ ಫಲವತ್ತತೆ ಹಾಗೂ ಮಾನವನ ಆರೋಗ್ಯದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದ್ದು, ಮುಂದಿನ ಭವಿಷ್ಯದ ದೃಷ್ಟಿಯಿಂದ ರಸಗೊಬ್ಬರಗಳ ಬಳಕೆ ಹಸಿರು ಗೊಬ್ಬರ, ಜೈವಿಕ ಗೊಬ್ಬರಗಳ ಬಳಕೆ ಹೆಚ್ಚಿಸುವುದು ಅಗತ್ಯವಿದೆ. ಈ ಬಗ್ಗೆಯೂ ರೈತರಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು.



