ಬೆಂಗಳೂರು: ಮಾಜಿ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಯೊಬ್ಬರ ನಡುವಿನ ಕೌಟುಂಬಿಕ ವಿವಾದದಲ್ಲಿ ಅನಧಿಕೃತ ಸಿಡಿಆರ್ (ಕರೆ ವಿವರಗಳ ದಾಖಲೆ) ಪಡೆದ ಆರೋಪ ಕೇಳಿ ಬಂದಿದೆ. ಈ ಸಂಬಂಧ ನಿವೃತ್ತ ಐಪಿಎಸ್ ಅಧಿಕಾರಿ, ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಐಎಎಸ್ ಅಧಿಕಾರಿ ಡಾ. ಆಕಾಶ್ ಎಸ್. ನೀಡಿರುವ ದೂರಿನ ಅನ್ವಯ ಮಾಜಿ ಐಪಿಎಸ್ ಅಧಿಕಾರಿ ಸುರೇಶ್ ಟಿ.ಆರ್. ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಐಯ್ಯಣ್ಣ ರೆಡ್ಡಿ ಸೇರಿದಂತೆ ಐವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕೌಟುಂಬಿಕ ವಿವಾದಕ್ಕೆ ಸಂಬಂಧಿಸಿದಂತೆ ಸುರೇಶ್ ಟಿ.ಆರ್. ಹಾಗೂ ಪ್ರಸ್ತುತ ಹೆಬ್ಬಗೋಡಿ ಠಾಣೆಯ ಇನ್ಸ್ಪೆಕ್ಟರ್ ಆಗಿರುವ ಐಯ್ಯಣ್ಣ ರೆಡ್ಡಿ ಸೇರಿ 2022ರ ಫೆಬ್ರವರಿಯಿಂದ 2023ರ ಜನವರಿಯವರೆಗಿನ ತಮ್ಮ ಕರೆಯ ವಿವರಗಳನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ನನಗೆ ಕಿರುಕುಳ ನೀಡಲು, ಬೆದರಿಕೆ ಹಾಕಲು ಬಳಸಿಕೊಂಡಿದ್ದಾರೆ ಎಂದು ಐಎಎಸ್ ಅಧಿಕಾರಿ ಡಾ. ಆಕಾಶ್ ಎಸ್. ದೂರಿದ್ದಾರೆ. ಈ ದೂರಿನ ಅನ್ವಯ ಸೈಬರ್ ಕ್ರೈಂ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸದ್ಯ ಹೆಬ್ಬಗೋಡಿ ಠಾಣೆಯ ಇನ್ಸ್ಪೆಕ್ಟರ್ ಆಗಿರುವ ಐಯ್ಯಣ್ಣ ರೆಡ್ಡಿಯವರ ವಿರುದ್ಧ ಈಗಾಗಲೇ ರೇವ್ ಪಾರ್ಟಿ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್.ಪಿ ಚಾರ್ಜ್ ಮೆಮೋ ನೀಡಿದ್ದಾರೆ. ಅದರ ಬೆನ್ನಲ್ಲೇ ಅನಧಿಕೃತವಾಗಿ ಸಿಡಿಆರ್ ತೆಗೆದಿರುವ ಆರೋಪ ಕೇಳಿ ಬಂದಿದೆ.




