ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬೆಳಗಾವಿ ಜಿಲ್ಲೆಯ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ರೈತ ಕುಟುಂಬದ ಗೃಹಬಂಧನ ವಿಚಾರ ಪ್ರಸ್ತಾಪಿಸಿ ಸಾಮಾಜಿಕ ಜಲಾತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪಾಳೇಗಾರಿಕೆ ರಾಜಕಾರಣದ ಪೋಷಣೆಗೆ ಹೆಸರಾದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರೈತ ಶೋಷಣೆ ಮಿತಿಮೀರುತ್ತಿದೆ’ ಎಂದು ಆರೋಪಿಸಿದ್ದಾರೆ.
ಇಸ್ಲಾಂಪುರ ಗ್ರಾಮದ ರೈತ ತನ್ನ ಕೃಷಿ ಚಟುವಟಿಕೆಯ ಸಲುವಾಗಿ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲು ವಿಳಂಬವಾಗಿದ್ದರಿಂದ ಸಾಲಕೊಟ್ಟವರು ರೈತನ ಪತ್ನಿ, ಪುತ್ರನನ್ನು ಅಕ್ರಮ ಗೃಹಬಂಧನದಲ್ಲಿಟ್ಟಿದ್ದರು. ಇದರಿಂದಾಗಿ ಮನನೊಂದು ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಈ ರಾಜ್ಯದ ಜನತೆ ಇನ್ನೂ ಏನೇನು ಅನುಭವಿಸಬೇಕೋ? ತಿಳಿಯದಾಗಿದೆ. ಗೂಂಡಾಗಳು, ಮೀಟರ್ ಬಡ್ಡಿ ದಂಧೆಕೋರರು, ಕೊಲೆಗಡುಕರಿಗೆ ಈ ಸರ್ಕಾರದ ಆಡಳಿತ ವ್ಯವಸ್ಥೆ ‘ನೆರಳಿನ ಭಾಗ್ಯ’ ಕಲ್ಪಿಸಿಕೊಡುತ್ತಿದೆ ಎಂದಿದ್ದಾರೆ.
ರಾಜ್ಯ ಸರ್ಕಾರಕ್ಕೆ ನೈತಿಕತೆಯಿದ್ದರೆ ಕೂಡಲೇ ಯಮಕನಮರಡಿ ರೈತನ ಆತ್ಮಹತ್ಯೆ ಪ್ರಕರಣದ ಕುರಿತು ಕಠಿಣ ಕ್ರಮ ಜರುಗಿಸಿ ಮುಂದೆಂದೂ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಿ. ರೈತ ಸಮೂಹಕ್ಕೆ ಆತ್ಮಸ್ಥೈರ್ಯ ತುಂಬುವ ಕಾರ್ಯಕ್ರಮ ರೂಪಿಸಲಿ, ಮೃತ ರೈತನ ಕುಟುಂಬಕ್ಕೆ ಸೂಕ್ತ ಆರ್ಥಿಕ ನೆರವು ಹಾಗೂ ಭದ್ರತೆ ಒದಗಿಸಬೇಕು ಎಂದಿದ್ದಾರೆ.




