ದೇಶಕ್ಕೆ ರೈತ ಮತ್ತು ಕಾರ್ಮಿಕರು ಎರಡು ಕಣ್ಣುಗಳು ಇದ್ದಂತೆ : ಪುಟ್ಟಸ್ವಾಮಿ ಗೌಡ

4 years ago

ಬೆಂಗಳೂರು: ದೇಶಕ್ಕೆ ರೈತ ಮತ್ತು ಕಾರ್ಮಿಕ ಎರಡು ಕಣ್ಣುಗಳು ಇದ್ದಂತೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿಗೌಡ ಹೇಳಿದರು.

ರೇಸ್ ಕೋರ್ಸ್ ರಸ್ತೆ ಕಾಂಗ್ರೆಸ್ ಭವನದಲ್ಲಿ ನೇಮಕಾತಿ ಆದೇಶ ಸಮಾರಂಭದಲ್ಲಿ ಮಾತಾಡಿದ ಅವರು, ದೇಶ ಕಟ್ಟುವಲ್ಲಿ ಕಾರ್ಮಿಕ, ಶ್ರಮಿಕ ವರ್ಗದವರ ಕೊಡುಗೆ ಅಪಾರ ಎಂದರು.

ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗ ಕಾರ್ಮಿಕರ ಸಂಕಷ್ಟಕ್ಕೆ ನೆರವು ನೀಡುವ ಮತ್ತು ಸಂಘಟನೆಯಲ್ಲಿ ಮಹತ್ವವಾದ ಪಾತ್ರವಹಿಸುತ್ತಿದೆ ಎಂದರು.

ಶ್ರಮಿಕವರ್ಗ ಕಾರ್ಮಿಕರು ಕಟ್ಟಡ, ಹೋಟೆಲು ಮತ್ತು ಕಾರ್ಖಾನೆ, ಗಾರ್ಮೆಂಟ್ಸ್ ಎಲ್ಲ ಉದ್ಯಮದಲ್ಲಿ ಇದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಕಾರ್ಮಿಕರಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಕಾರ್ಮಿಕರು ಆರ್ಥಿಕವಾಗಿ ಸಬಲರಾಗಲು ಕಾರಣವಾಗಿದೆ. ಕೊರೋನ ಸಂಕಷ್ಟ ಕಾಲದಲ್ಲಿ ಕಾಂಗ್ರೆಸ್ ಕಾರ್ಮಿಕ ವಿಭಾಗದಿಂದ ದಿನಸಿ ಕಿಟ್ ಗಳನ್ನು ವಿತರಿಸಲಾಯಿತು ಎಂದರು.

ಕಾಂಗ್ರೆಸ್ ಪಕ್ಷದ ಯುವ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಭಾರತ ಐಕ್ಯತಾ ಪಾದಯಾತ್ರೆಯಲ್ಲಿ ಕಾರ್ಮಿಕರ ವಿಭಾಗದ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು ಎಂದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ವಿ.ಮಂಜುನಾಥ್, ಉಪಾಧ್ಯಕ್ಷ ಅಹಮದ್ ಶರೀಫ್, ಕೆ ಜಿ ಮೋಹನ್ ಕುಮಾರ್, ಕಾರ್ಯಕರ್ತರು ಹಾಜರಿದ್ದರು.

Leave a Reply